24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರಸನ್ನಕುಮಾರ ಐತಾಳರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಉಜಿರೆ : ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ನೀಡುವ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಅವರು ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷೆಯನ್ನು ಪರಿಣಾಮಕಾರಿಯಾಗಿ ಬೋಧಿಸುವುದರ ಜೊತೆಗೆ, ವೃತ್ತಿಪರ ಹಾಗೂ ಬೋಧನಾ ಕ್ಷೇತ್ರದ ಅನುಭವ , ಪ್ರವೃತ್ತಿಯೊಂದಿಗೆ ಸಾಂಸ್ಕೃತಿಕ , ಸಾಮಾಜಿಕ , ಸಾಹಿತ್ಯಿಕ ಕ್ಷೇತ್ರಗಳಲ್ಲಿನ ಕೊಡುಗೆಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿರುವ ಇವರು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಪತ್ರಿಕೆಗಳಲ್ಲಿ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ, ವಿವಿಧ ವಿಚಾರಸಂಕಿರಣಗಳು ಹಾಗೂ ವಿಚಾರಗೋಷ್ಠಿಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇದುವರೆಗೆ ಹದಿನೆಂಟು ಪುಸ್ತಕಗಳನ್ನು ಪ್ರಕಟಿಸಿರುವ ಇವರು ಸಾಹಿತ್ಯ, ಸಂಶೋಧನೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ.
ಶಿಕ್ಷಣ ಕ್ಷೇತ್ರದ ಜೊತೆಗೆ ನಾಟಕ, ಯಕ್ಷಗಾನ, ಗಮಕ-ಪ್ರವಚನ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಿ ವಿವಿಧ ಜನೋಪಯೋಗಿ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸಂಘಟಿಸಿರುತ್ತಾರೆ. ಪ್ರಸ್ತುತ ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋಟೇಶ್ವರದ ದಿವಂಗತ ಕೃಷ್ಣ ಐತಾಳ್ ಹಾಗೂ ಜಯಲಕ್ಷ್ಮೀ ಐತಾಳ್ ದಂಪತಿಯ ಪುತ್ರರಾದ ಇವರು ಈ ಹಿಂದೆ 2024ರಲ್ಲಿ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ವತಿಯಿಂದ ಶಿಕ್ಷಣ ತಜ್ಞ ಅಡ್ಕ ಶಾಮರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು.

ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ ನಲ್ಲಿ ಅ. 13 ರಂದು ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಇವರನ್ನು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!