25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯಿಂದ ಕೌಶಲ್ಯ ತರಬೇತಿ ಹಾಗೂ ಬ್ಯಾಂಕ್ ಸೌಲಭ್ಯಗಳ ಮಾಹಿತಿ ಉದ್ಘಾಟನೆ

ಬೆಳ್ತಂಗಡಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಹಾಗೂ ಬ್ಯಾಂಕ್ ಸೌಲಭ್ಯಗಳ ಮಾಹಿತಿ ಹಾಗೂ ಅರಿ ವರ್ಕ್ ಎಂಬ್ರಾಯಿಡಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆ.7 ರಂದು ಬೆಳ್ತಂಗಡಿ ಸುವರ್ಣ ಅರ್ಕೇಡ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕರಾದ ಜ್ಯೋತಿರಾಜ್ ದೀಪ ಬೆಳಗಿಸಿ ಉದ್ಘಾಟಿಸಿ ಮಹಿಳೆಯರು ಸ್ವ ಉದ್ಯೋಗವನ್ನು ಕಳಿತು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕೆಂದು ಕರೆ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮಗಳ ವ್ಯವಸ್ಥಾಪಕ ಜೀವನ್ ಕೊಲ್ಯ ಶುಭವನ್ನು ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ದೀಕ್ಷಾ ಕಲ್ಲೇರಿ, ಎಸ್ ವಿ ಫ್ಯಾಮಿಲಿ ಬ್ಯುಟೀಶನ್ ಮಾಲಕಿ ಶಾಂತಾ ಬಂಗೇರ ,ವಸಂತ ಟೈಲರ್ ಸ್ವಾತಿ, ಮೋಹನ್ ಶ್ವತ್ತಿ, ಹರೀಶ್ ಜಿ.ವಿ.ಮುಂತಾದವರು ಹಾಗೂ ಆರಿ ವರ್ಕ್ ತರಬೇತಿ ಪಡೆಯಲು ಬಂದಿರುವ 30ಕ್ಕೂ ಹೆಚ್ಚು ಮಹಿಳೆಯರು ಉಪಸ್ಥಿತರಿದ್ದರು.
ಸದಾನಂದ ಸಾಲಿಯಾನ್ ಬಳಂಜ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya
error: Content is protected !!