25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ವತಿಯಿಂದ 4ನೇ ತರಗತಿಯಿಂದ 7 ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಅ. 6 ರಂದು ಆಯೋಜಿಸಲಾಯಿತು.

ಮುಖ್ಯ ಅತಿಥಿಯಾಗಿ ಫಾದರ್ ಪತ್ರಾವೊ ಆಸ್ಪತ್ರೆ, ಪುತ್ತೂರು ಇದರ ಡಾ. ಸಿ. ಜ್ವಾನ ಸಿಕ್ವೇರಾ, ಭಾಗವಹಿಸಿ, ಬಾಲಕಿಯರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿನಿಯರು ತಮ್ಮ ದೈನಂದಿನ ಜೀವನದಲ್ಲಿ ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯಕರ ಅಭ್ಯಾಸಗಳನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳುವುದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ಆರೋಗ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೊ ವಹಿಸಿದ್ದರು. ಸಿಸ್ಟರ್ ಮೇರಿ ಉಪಸ್ಥಿತರಿದ್ದರು.

ಶಿಕ್ಷಕಿ ತೇಜಸ್ವಿ ಕಾರ್ಯಕ್ರಮದ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!