25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಅ.8: ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಬೆಳ್ತಂಗಡಿ 33 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ. 8ರಂದು ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಲ್ಯಾಲ ಫೀಡರ್ ಹಾಗೂ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬಂಗಾಡಿ, ಕೊಲ್ಲಿ, ಕೊಯ್ಯೂರು, ಉಜಿರೆ ಮತ್ತು ಬೆಳಾಲು ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಇರಲಿದೆ.ಅದೇ ರೀತಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಧರ್ಮಸ್ಥಳ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರ್‌ಗಳ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ: ಪ್ರತಿಜ್ಜಾ ವಿಧಿ ಸ್ವೀಕಾರ, ಬಿತ್ತಿ ಪತ್ರಿಕೆ ಅನಾವರಣ

Suddi Udaya

ನಾಳೆ(ಅ.7) : ವಿದ್ಯುತ್ ನಿಲುಗಡೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!