24.8 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಜ್ಞಾಹೀನ ಸ್ಥಿತಿಗೆ ಜಾರಿದ ಮಹಿಳೆ: ಬಸ್ಸನ್ನು ಆಸ್ಪತ್ರೆಗೆ ಚಲಾಯಿಸಿ ಮಾನವೀಯತೆ ಮೆರೆದ ಬಸ್ ಚಾಲಕ

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ನಲ್ಲಿ ಅ.6 ರಂದು ಸಂಜೆ 4 ಗಂಟೆಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಅಸ್ವಸ್ಥರಾಗಿ ಪ್ರಜ್ಞೆ ತಪ್ಪಿ, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ಈ ಬಗ್ಗೆ ಚಾಲಕ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ. ಪರಿಸ್ಥಿತಿಯ ತೀವ್ರತೆ ಅರಿತ ಬಸ್ ಚಾಲಕ ಕಿರಣ್ ಹಾಗೂ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಕಕ್ಕಿಂಜೆ ಬರುತ್ತಿದ್ದಂತೆಯೇ ನೇರವಾಗಿ ಬಸ್ಸನ್ನು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ 4:30 ಕ್ಕೆ ಕೊಂಡೊಯ್ದು ಸಂಕಷ್ಟದಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕಾರ್ಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರುಕ್ ಕಕ್ಕಿಂಜೆ, ಗಾಂಧಿನಗರ ಹಾಗೂ ನೌಫಾಲ್ ಕಕ್ಕಿಂಜೆ, ಗಾಂಧಿನಗರ ಅವರು ಮಹಿಳೆಗೆ ಅಗತ್ಯ ಸಹಾಯ ಮಾಡುವಲ್ಲಿ ಜೊತೆಯಾಗಿ ನಿಂತಿದ್ದಾರೆ.

Related posts

ಚಾರ್ಮಾಡಿ ಜಾರುವ ರಸ್ತೆಗೆ ಮತ್ತೆ ರಫಿಂಗ್

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿ ರೂ.15.82 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

Suddi Udaya
error: Content is protected !!