25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧಕಿ ರಕ್ಷಾ ಡಿ. ಬಾರ್ಯ ರಿಗೆ ಜಾಗತಿಕ ಬಿಲ್ಲವ ಮಹಾಮಂಡಲ ಹಾಗೂ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಿಂದ ಗೌರವಾರ್ಪಣೆ

ಬೆಳ್ತಂಗಡಿ : ಬಾರ್ಯ ಗ್ರಾಮದ ಅದಮ್ಮ ನಿವಾಸಿಯಾದ ಧರ್ಣಪ್ಪ ಪೂಜಾರಿ ಮತ್ತು ವನಿತಾ ದಂಪತಿಯ ಪುತ್ರಿ . ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು.ರಕ್ಷಾ.ಡಿ ಇವರು ತನ್ನ ಕೈಯನ್ನು ಸೊಂಟದಲ್ಲಿ ಹಿಡಿದುಕೊಂಡು ನಿಮಿಷಕ್ಕೆ 179 ಸಲ ಮುಂಗೈಯನ್ನು ಹಿಂದಕ್ಕೆ ಹಾಗೂ ಮುಂದಕ್ಕೆ ಮುಟ್ಟಿಸುವುದರ ಮೂಲಕ ಅತ್ಯಂತ ಕ್ಲಿಷ್ಟಕರವಾದ ಸಾಧನೆಗೈದು “ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ “ದಾಖಲೆಯನ್ನು ಮಾಡಿ ಊರಿಗೆ ಹಾಗೂ ಶಾಲೆಗೆ ಹೆಸರನ್ನು ತಂದಿದ್ದಾರೆ.

ಅವರ ಈ ಸಾಧನೆಗೆ ಜಾಗತಿಕ ಬಿಲ್ಲವ ಮಹಾಮಂಡಲ ಹಾಗೂ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು. ಆ ಸಂದರ್ಭದಲ್ಲಿ ಜಾಗತಿಕ ಬಿಲ್ಲವ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಎಂ, ಗುರು ಚಾರಿಟೇಬಲ್ ಕೋಶಾಧಿಕಾರಿ ಭಾಸ್ಕರ ಅಮೀನ್, ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ನಿರ್ದೇಶಕಿ ಉಷಾ ಶರತ್ ಬಾರ್ಯ, ಶೇಖರ್ ಪೂಜಾರಿ ಆನಲ್ಕೆ, ಬಾರ್ಯ, ತೆಕ್ಕರು ಬಿಲ್ಲವ ಸಂಘದ ಅಧ್ಯಕ್ಷ ದಿನೇಶ್ ಸುಣ್ಣಾಜೆ, ಪೋಷಕರಾದ ಧರ್ಣಪ್ಪ ಪೂಜಾರಿ ಮತ್ತು ವನಿತಾ ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya
error: Content is protected !!