24.9 C
ಪುತ್ತೂರು, ಬೆಳ್ತಂಗಡಿ
October 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಯುವ ಉದ್ಯಮಿ ಸ್ವರೂಪ್ ಶೇಖರ್ ಖಂಡನೆ

ನಾವೂರು: ಕಳೆದ 27 ವರ್ಷಗಳಿಂದ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಬಿಲ್ಡಿಂಗ್‌ನಲ್ಲಿ ಡಾ. ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸಿಕೊಂಡು ಬರುತ್ತಿದ್ದು, ಸರ್ವಧರ್ಮೀಯರಿಗೂ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವ ಅವರ ಕ್ಲಿನಿಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಯನ್ನು ಯುವ ಉದ್ಯಮಿ ಸ್ವರೂಪ್ ಶೇಖರ್ ತೀವ್ರವಾಗಿ ಖಂಡಿಸಿದ್ದಾರೆ.

ಡಾ. ಪ್ರದೀಪ್ ನಾವೂರು ಅವರು ವೈದ್ಯಕೀಯ ಸೇವೆಯ ಜೊತೆಗೆ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು, ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ವಿಶೇಷವಾಗಿ ನಾವೂರು ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಸಂದೇಶಗಳನ್ನು ಸಾರುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆಗೆ ಕಾರಣರಾಗಿರುವ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಸ್ವರೂಪ್ ಶೇಖರ್ ತಿಳಿಸಿದ್ದಾರೆ.

ನನ್ನ ತಂದೆ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಬಿಲ್ಡಿಂಗ್‌ನಲ್ಲಿ ಒಟ್ಟು ಎರಡು ಕೋಣೆಗಳಿದ್ದು, ಅದರಲ್ಲಿ ಒಂದು ಕೋಣೆಯಲ್ಲಿ ಕಳೆದ 27 ವರ್ಷಗಳಿಂದ ಡಾ. ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸುತ್ತಿದ್ದಾರೆ. ಯಾವುದೇ ಭೇದಭಾವವಿಲ್ಲದೆ ಸರ್ವಧರ್ಮೀಯರಿಗೂ ಆರೋಗ್ಯ ಸೇವೆ ನೀಡುತ್ತಾ ಬಂದಿರುವ ಕ್ಲಿನಿಕ್‌ಗೆ ದುರುದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ. ಇಂತಹ ಕೃತ್ಯವು ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.

ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪೊಲೀಸ್ ಇಲಾಖೆ ಸಮಗ್ರವಾಗಿ ತನಿಖೆ ನಡೆಸಬೇಕು. ಕೃತ್ಯಕ್ಕೆ ಕಾರಣರಾದವರನ್ನು ಶೀಘ್ರವಾಗಿ ಪತ್ತೆಹಚ್ಚಿ, ಕಾನೂನುಬದ್ಧವಾಗಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸಮಾಜದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವವರ ಮೇಲೆ ಇಂತಹ ದುಷ್ಕೃತ್ಯಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಯುವ ಉದ್ಯಮಿ ಸ್ವರೂಪ್ ಶೇಖರ್ ಒತ್ತಾಯಿಸಿದ್ದಾರೆ.

Related posts

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya
error: Content is protected !!