32.7 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್‌ಗೆ ದುಷ್ಕರ್ಮಿಗಳಿಂದ ಬೆಂಕಿ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಖಂಡನೆ

ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಅವರಿಗೆ ಸೇರಿದ ಆರೋಗ್ಯ ಕ್ಲಿನಿಕ್‌ಗೆ ನಿನ್ನೆ (ಅ.6) ತಡರಾತ್ರಿ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕ್ಲಿನಿಕ್‌ನ ಮೂರು ಕೊಠಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ದುಷ್ಕೃತ್ಯಕ್ಕೆ ಖಂಡನೆ:

ಈ ಅಮಾನವೀಯ ಮತ್ತು ಹೇಯ ಕೃತ್ಯವನ್ನು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ತೀವ್ರವಾಗಿ ಖಂಡಿಸಲಾಗಿದೆ. ಆರೋಗ್ಯ ಸೇವೆ ನೀಡುತ್ತಿರುವ ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚುವುದು ಸಮಾಜಘಾತುಕ ಕೃತ್ಯವಾಗಿದ್ದು, ಇದು ವ್ಯಾಪಾರಸ್ಥರಲ್ಲೂ ಆತಂಕ ಮೂಡಿಸಿದೆ. ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!