32.7 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಬಳಂಜ: ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಬೇಕು.ಹಾಗಾಗಿ ವಿದ್ಯಾರ್ಥಿಗಳು ಶಿಬಿರದಲ್ಲಿ ಜೀವನ ಪಾಠ ಕಳಿಯಬೇಕು ಎಂದು ಕೆ‌.ವಸಂತ ಸಾಲಿಯಾನ್ ಹೇಳಿದರು.

ಅವರು ಅ 8 ರಂದು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಬಳಂಜ ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಬಳಂಜ ಶಾಲೆಯಲ್ಲಿ ನಮ್ಮ ಮಕ್ಕಳ ಶಿಬಿರ ನಡೆಸಲು ಅವಕಾಶ ಕಲ್ಪಿಸಿದ ಎಲ್ಲರಿಗೂ ವಂದನೆಗಳು.ಒಂದು ವಾರದಲ್ಲಿ ವಿದ್ಯಾರ್ಥಿಗಳು ಬದುಕಿನ ಮೌಲ್ಯಗಳನ್ನು ಕಲಿಯಬೇಕು ಎಂದರು‌.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ. , ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ನಿರ್ದೇಶಕ ರತ್ನರಾಜ ಜೈನ್,ಗ್ರಾಮ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಬಿ ಅಮೀನ್, ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ನಾರಾವಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ,ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲ ಸುಕೇಶ್ ಕುಮಾರ್ ಕೆ, ಉಪಸ್ಥಿತರಿದ್ದರು.

ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿದರು‌.ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಪೋಷಕರು ಸಹಕರಿಸಿದರು.

Related posts

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!