34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಬೆಳ್ತಂಗಡಿ: ಮನೆಯ ಬಳಿಯ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಅಜಿಕುರಿ ಬಳಿಯ ನಝಿರ್ ಎಂಬವರು ಅ 04 ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದ ಪರಿಣಾಮ ವಿದ್ಯುತ್ ಶಾಕ್‌ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಅ.8 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related posts

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನೆಯಿಂದ ತೆರಳಿದ ವ್ಯಕ್ತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!