34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಅ.8ರಂದು ಮುಂಜಾನೆ ನಡೆದಿದೆ.

ಘಟನೆಯಲ್ಲಿ ಲಾರಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ವಾಹನಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮುಂಜಾನೆ ಸಮಯದಲ್ಲಿ ಘಟನೆ ಸಂಭವಿಸಿದ್ದರಿಂದ ಲಾರಿಯ ಸಂಚಾರ ಕಡಿಮೆ ಇದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಲಾರಿ ರಸ್ತೆ ಬದಿಗೆ ಬಿದ್ದಿರುವುದರಿಂದ ಮುಖ್ಯ ರಸ್ತೆಯಲ್ಲಿ ಇತರ ವಾಹನಗಳ ಸಂಚಾರಕ್ಕೆ ಹೆಚ್ಚಿನ ಅಡ್ಡಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

Related posts

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya
error: Content is protected !!