32.7 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ನಿನ್ನೆ ಸಮಾಜಘಾತಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಅವರು ಇಂದು ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಘಟನೆ ಬಗ್ಗೆ ತೀವ್ರ ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಸಾರ್ವಜನಿಕರ ಆರೋಗ್ಯ ಸೇವೆಗೆ ಮೀಸಲಾಗಿರುವ ಸಂಸ್ಥೆಯ ಮೇಲೆ ಈ ರೀತಿಯ ದಾಳಿ ನಡೆಸಿರುವುದು ಅತ್ಯಂತ ಖಂಡನೀಯ. ಸಮಾಜ ಸೇವೆ ಹಾಗೂ ಸಾರ್ವಜನಿಕರ ಆರೋಗ್ಯ ಸೇವೆಗೆ ಕಾರ್ಯನಿರ್ವಹಿಸುವ ಸ್ಥಳಗಳ ಮೇಲೆ ಇಂತಹ ದುಷ್ಕೃತ್ಯ ಎಸಗುವುದು ಅಕ್ಷಮ್ಯ ಎಂದು ಹೇಳಿದರು.

ಘಟನೆಯ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ಕೃತ್ಯದ ಹಿಂದೆ ಇರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಬೇಕು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಸೋಮಯ್ಯ ಮೂಲ್ಯ ಹನೈನಡೆಯವರಿಗೆ‘ಕುಲಾಲ ಭೀಷ್ಮ’ ಗೌರವ ಪ್ರಶಸ್ತಿ ಪ್ರದಾನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!