ಬೆಳ್ತಂಗಡಿ: ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅ. 06 ರಂದು ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡೀಸೆಲ್ ಸುರಿದು ಬೆಂಕಿ ಹಚ್ಚಿ ಹೇಯ ಕೃತ್ಯವೆಸಗಿದ್ದಾರೆ. ಈ ಕೃತ್ಯವನ್ನು ಎಸಗಿದ ದುಷ್ಕರ್ಮಿಗಳಿಗೆ ಶಿಕ್ಷೆಯಾಗುವಂತೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಿತು.
ಈ ವೇಳೆ ಶಾಸಕ ಹರೀಶ್ ಪೂಂಜ, ಶಶಿಧರ್ ಶೆಟ್ಟಿ ಬರೋಡಾ, ಪ್ರತಾಪ ಸಿಂಹ ನಾಯಕ್ , ಡಾ. ಪ್ರದೀಪ್ ನಾವೂರು, ಹಾಗೂ ಇತರರು ಭಾಗಿಯಾದರು.













