34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಅ11: ವಿದ್ವತ್ ಪಿಯು ಕಾಲೇಜಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು, ಶೈಕ್ಷಣಿಕ ಶ್ರೇಷ್ಠತೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಶಿಕ್ಷಣ ಸಂಸ್ಥೆಯಾಗಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಅ 11ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ವಿದ್ಯಾರ್ಥಿಗಳಲ್ಲಿರುವ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ, ಅದನ್ನು ಪೋಷಿಸುವುದು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವಿನೊಂದಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸುವುದು ಈ ಪ್ರತಿಭಾ ಪರೀಕ್ಷೆಯ ಉದ್ದೇಶವಾಗಿದೆ.

ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಇದರ ಮೂಲಕ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ತಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಸಹಕಾರಿಯಾಗಲಿದೆ.

ವಿದ್ವತ್ ಪಿಯು ಕಾಲೇಜು ತನ್ನ ಪ್ರಥಮ ಬ್ಯಾಚ್‌ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. KCET ಎಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ನಾಲ್ವರು ವಿದ್ಯಾರ್ಥಿಗಳಿಗೆ AIIMS ಪ್ರವೇಶ ದೊರೆತಿರುವುದು ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿದೆ.

ರಾಜ್ಯದ ಯಾವುದೇ ಪ್ರದೇಶದಿಂದ ಪ್ರತಿಭಾವಂತ ಮತ್ತು ಉನ್ನತ ಶಿಕ್ಷಣದ ಆಶಯ ಹೊಂದಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.ಉಚಿತ
ನೋಂದಣಿಗಾಗಿ ಮೊ 7618775602-7618775600 ಕಾಲ್ ಮಾಡಬಹುದಾಗಿದೆ.ಆನ್ ಲೈನ್ ನೋಂದಣಿಗಾಗಿ
https://www.vidvath.org/talent-test/
ಸಂಪರ್ಕಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ವಿದ್ಯಾರ್ಥಿವೇತನದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ವತ್ ಪಿಯು ಕಾಲೇಜು ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ಪ್ರಜ್ವಲ್ ರೈ ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!