ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಾವಿರಾರು ಮಂದಿ ಭಕ್ತಾದಿಗಳು, ಯಾತ್ರಾರ್ಥಿಗಳು, ಪ್ರವಾಸಿಗರು ಆಗಮಿಸುವ ಸ್ಥಳವಾಗಿದ್ದು. ಸ್ವಚ್ಛತೆಯನ್ನು ಕಾಪಾಡುವುದು ಪ್ರಾಮುಖ್ಯವಾಗಿದೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ ಇವರ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿ ಸಿಬ್ಬಂದಿ ವರ್ಗ, ಕಂದಾಯ ಇಲಾಖೆಯ ಸಿಬ್ಬಂದಿ, ತ್ಯಾಜ್ಯ ವಿಲೇವರಿ ಘಟಕದ ಸ್ವಚ್ಛತಾ ನೌಕರರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಸಾಮಾಜ ಕಾರ್ಯ ವಿದ್ಯಾರ್ಥಿಗಳು, ಹಾಗೂ ಮಾನ್ವಿ ಮಹಿಳಾ ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಂಥಾಲಯ ಅರಿವು ಕೇಂದ್ರದ ಮೇಲ್ವಿಚಾರಕರು ಒಟ್ಟಾಗಿ ಧರ್ಮಸ್ಥಳ ಕಲ್ಲೇರಿಯಿಂದ, ಬೆಂಗಳೂರು ರಸ್ತೆ ಕುದುರಾಯ ಸೇತುವೆ ತನಕ ರಸ್ತೆ ಬದಿ ಸ್ವಚ್ಛತೆಯನ್ನು ಮಾಡಲಾಯಿತು.
ಸಂಗ್ರಹವಾಗಿರುವ ಕಸವನ್ನು ವಿಂಗಡಿಸಿ ಉಜಿರೆ ಎಂ ಆರ್ ಎಫ್ ಘಟಕಕ್ಕೆ ವಿಲೇವಾರಿ ಮಾಡಲಾಯಿತು.













