34.1 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್‌& ಫರ್ನಿಚರ್ಸ್ ನಲ್ಲಿ ‘ಆಕಾಶ್ ಉಳಿತಾಯ ಯೋಜನೆ’ಗೆ ಭರ್ಜರಿ ಸ್ಪಂದನೆ: ವಿದ್ಯಾರ್ಥಿಗಳಿಗೆ ವಿಶೇಷ ಆಫರ್: ಐಫೋನ್ ಗೆಲ್ಲುವ ಅವಕಾಶ

ಬೆಳ್ತಂಗಡಿ: ಗ್ರಾಹಕರಿಗೆ ಉಳಿತಾಯದ ಉತ್ತಮ ಅವಕಾಶದೊಂದಿಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಆಕಾಶ್ ಮಾಸಿಕ ಉಳಿತಾಯ ಯೋಜನೆ ಪ್ರಾರಂಭಗೊಂಡಿದೆ. ಗ್ರಾಹಕರಿಂದ ಭರ್ಜರಿ ಸ್ಪಂದನೆ ದೊರೆತಿದೆ ಎಂದು ಸಂಸ್ಥೆಯ ಮಾಲಕ ಅಲ್ಪೋನ್ಸ್ ಫ್ರಾಂಕೋ ತಿಳಿಸಿದ್ದಾರೆ.

ಸೋಜಾ ಎಲೆಕ್ಟ್ರಾನಿಕ್ಸ್‌ನ 32ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಅಂಗವಾಗಿ ರೂಪಿಸಿರುವ ಈ ಯೋಜನೆಯಲ್ಲಿ ಗ್ರಾಹಕರು ಮಾಸಿಕವಾಗಿ ರೂ 1000 ಪಾವತಿಸಿ, ಉಳಿತಾಯ ಮಾಡುವ ಮೂಲಕ ವಿವಿಧ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಹೊಂದಿದ್ದಾರೆ.

ಯೋಜನೆಯಡಿ ಅದೃಷ್ಟಶಾಲಿ ಗ್ರಾಹಕರಿಗೆ ವಿಶೇಷ ಬಹುಮಾನಗಳು ಲಭಿಸಲಿವೆ. ಉಳಿತಾಯದೊಂದಿಗೆ ಬಹುಮಾನ ಪಡೆಯುವ ಅವಕಾಶವನ್ನು ಕಲ್ಪಿಸಿರುವುದು ಯೋಜನೆಯ ವಿಶೇಷತೆಯಾಗಿದೆ.ನವಂಬರ್ ತಿಂಗಳ‌ 10ನೇ ತಾರೀಕಿಗೆ ಮೊದಲ ಡ್ರಾ ನಡೆಯಲಿದೆ.

ವಿದ್ಯಾರ್ಥಿಗಳಿಗೆ ವಿಶೇಷ ಆಫರ್: ಐಫೋನ್ ಗೆಲ್ಲುವ ಅವಕಾಶ

ಸೋಜಾ ಮಳಿಗೆಯ ಸಂಭ್ರಮಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಿಶೇಷ ಐಫೋನ್ ಆಫರ್ ಅನ್ನು ಸಂಸ್ಥೆ ಘೋಷಿಸಿದೆ. ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಸ್ಥೆಗೆ ಬಂದು ಉಚಿತ ಕೂಪನ್ ಪಡೆದು ಲಕ್ಕಿ ಡ್ರಾದಲ್ಲಿ ಭಾಗವಹಿಸಿ ಐಫೋನ್ ಸೇರಿದಂತೆ ಆಕರ್ಷಕ 10 ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಲಾಗಿದೆ.

ಗ್ರಾಹಕರ ವಿಶ್ವಾಸವೇ ನಮ್ಮ ಶಕ್ತಿ: ಅಲ್ಫೋನ್ಸ್ ಫ್ರಾಂಕೋ

ಸಂಸ್ಥೆಯ 32 ವರ್ಷಗಳ ಪಯಣದಲ್ಲಿ ಗ್ರಾಹಕರು ನೀಡಿರುವ ಪ್ರೀತಿ, ವಿಶ್ವಾಸ ಮತ್ತು ಸಹಕಾರವೇ ನಮ್ಮ ಶಕ್ತಿಯಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜೊತೆಗೆ ಅವರ ಉಳಿತಾಯಕ್ಕೆ ಪ್ರೋತ್ಸಾಹ ನೀಡಬೇಕು ಎಂಬ ಉದ್ದೇಶದಿಂದ ‘ಸೋಜಾ ಆಕಾಶ್ ಮಾಸಿಕ ಉಳಿತಾಯ ಯೋಜನೆ’ ರೂಪಿಸಲಾಗಿದೆ. ಉಳಿತಾಯದ ಜೊತೆಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶವನ್ನು ಗ್ರಾಹಕರಿಗೆ ನೀಡುವುದು ನಮ್ಮ ಉದ್ದೇಶವಾಗಿದೆ.ವಿದ್ಯಾರ್ಥಿಗಳು ದೇಶದ ಭವಿಷ್ಯ. ಅವರ ವಿದ್ಯಾಭ್ಯಾಸ ಹಾಗೂ ಪ್ರತಿಭೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಐಫೋನ್ ವಿಶೇಷ ಆಫರ್‌ನ್ನು ಪ್ರತ್ಯೇಕವಾಗಿ ವಿದ್ಯಾರ್ಥಿಗಳಿಗಾಗಿ ನೀಡಲಾಗಿದೆ. ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಂಡು ಮುಂದೆಯೂ ಇನ್ನಷ್ಟು ಉತ್ತಮ ಸೇವೆ ಮತ್ತು ಯೋಜನೆಗಳನ್ನು ನೀಡುವುದು ನಮ್ಮ ಆಶಯ ಎಂದು ಅಲ್ಫೋನ್ಸ್ ಫ್ರಾಂಕೋ ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!