ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ಯಶ್ವಿತ್ ಶೆಟ್ಟಿ ಅವರು ವೈಯಕ್ತಿಕವಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಅಕ್ಷತ್ ಕೆ . ಅವರು ತರಬೇತಿ ನೀಡಿದ್ದರು.













