ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅ.9 ರಂದು ಗಣಕಯಂತ್ರ ವಿಜ್ಞಾನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ವರದರಾಜ್ ಎ. ಎಸ್. ಹಾಗೂ ಪ್ರಶಿಕ್ಷಕರಾದ ಬಿ. ಹೇಮಾ ಆನಂದ್ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳೊಂದಿಗೆ ಗಣಕಯಂತ್ರ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡರು.
ಕಾರ್ಯಾಗಾರದಲ್ಲಿ Hardware Demystified, Scratch Game Creation, Webpage Creation, Cyber Escape, AI Puzzles ಹಾಗೂ AI Demo ಮುಂತಾದ ವಿವಿಧ ಚಟುವಟಿಕೆಗಳನ್ನು ಪರಿಚಯಿಸಿ, ಅವುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಈ ಮೂಲಕ ವಿದ್ಯಾರ್ಥಿಗಳಿಗೆ ಗಣಕಯಂತ್ರದ ಹಾರ್ಡ್‌ವೇರ್, ಆಟಗಳ ರಚನೆ, ವೆಬ್‌ಪುಟ ನಿರ್ಮಾಣ, ಸೈಬರ್ ಸುರಕ್ಷತೆ ಹಾಗೂ ಕೃತಕ ಬುದ್ಧಿಮತ್ತೆಯ ಕುರಿತು ಅರಿವು ಮೂಡಿಸಲಾಯಿತು.













