33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ಗ್ರಾಮಸಭೆ

ಉಜಿರೆ: ಉಜಿರೆ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಅ.9 ರಂದು ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮಹಾವೀರ ಶೇಬಣ್ಣವರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಇವರು ಗ್ರಾಮ ಸಭೆಯ ಮುನ್ನಡೆಸಿದರು. ಸಭೆಯಲ್ಲಿ ಪಂಚಾಯತ್ ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ವರ್ಗದವರು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ರಾಘವೇಂದ್ರ ಪಾಟೀಲ್ ಸ್ವಾಗತಿಸಿದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಮಮತಾ ಜಮಾ ಖರ್ಚು ವಾಚಿಸಿ, ಸಿಬ್ಬಂದಿ ರಮೇಶ್ ನಾಯ್ಕ ಅನುಪಾಲನಾ ವರದಿ ವಾಚಿಸಿ ಉಮೇಶ್ ಗೌಡ ನಿವೇಶನ ರಹಿತರ ವಿವರ ನೀಡಿದರು. ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಸಾರ್ವಜನಿಕ ಬಾವಿಗಳ ಅತಿಕ್ರಮಣ ಆರೋಪ: ಲಾಯಿಲ ಪಂಚಾಯತ್‌ನಿಂದ ನಾಮಫಲಕ ಅಳವಡಿಕೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!