ನಾವೂರು: ದುಷ್ಕರ್ಮಿಗಳಿಂದ ಡೀಸೆಲ್ ಸುರಿದು ಬೆಂಕಿ ಹಚ್ಚಿದ ನಾವೂರು ಆರೋಗ್ಯ ಕ್ಲಿನಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್ ಭೂಮರೆಡ್ಡಿ ಅವರು ಅ.08 ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಘಟನಾ ಸ್ಥಳದ ಪರಿಶೀಲನೆ ನಡೆಸಿದ ಅವರು, ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಅವರಿಂದ ಮಾಹಿತಿ ಪಡೆದುಕೊಂಡರು. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ದೊರಕಿಸಿಕೊಡುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಠಾಣಾ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.













