33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆ

ಲಾಯಿಲ : ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆಯು ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿರುವ ರೋಟರಿ ಭವನದಲ್ಲಿ ಜರುಗಿತು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಜೆ ವೆಂಕಟೇಶ ಭಟ್, ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಉದ್ಘಾಟನಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರುಗಳಾರಾದ ಗುಣಪಾಲ್ ಎಂ ಎಸ್ ನಿರೂಪಿಸಿ, ಸಂದೀಪ್ ಐ ಸ್ವಾಗತಿಸಿ, ಬಾಲಕೃಷ್ಣ ಧನ್ಯವಾದಗೈದರು.
ಕಾಲೇಜಿನ ಕಚೇರಿ ಸಿಬ್ಬಂದಿಗಳಾದ ಜನಾರ್ಧನ ಹಾಗೂ ಯೋಗೀಶ್ ಸಹಕರಿಸಿದರು.

Related posts

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
error: Content is protected !!