33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

ಬೆಳ್ತಂಗಡಿ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಪೋಷಣ ಅಭಿಯಾನ ಯೋಜನೆಯಡಿ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಅ.9 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪೊಷಣ್ ಅಭಿಯಾನ ಕಮಿತಿ  ಅಧ್ಯಕ್ಷ  ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ  ಕಾರ್ಯಕ್ರಮ ಉದಾಟಿಸಿ ಮಾತನಾಡಿ 1983 ರಲ್ಲಿ ಈ ಯೋಜನೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಿದೆ. ಇಂದು ನಾವು ತಿನ್ನುತ್ತಿರುವ ಆಹಾರ ಸುರಕ್ಷಿತವೇ ಎಂದು ಆಲೋಚಿಸಬೇಕಾದ ಪರಿಸ್ಥಿತಿ ನಮ್ಮಮುಂದೆ ಇದೆ. ಪೌಷ್ಟಿಕ ಆಹಾರವನ್ನು ಹುಡಕುವ ಸ್ಥಿತಿಗೆ ಬಂದು ತಲುಪಿದೆ. ಆಹಾರಗಳ ಗುಣಮಟ್ಟವನ್ನು ಪರಿಶೀಲಿಸಿ ಖರಿದೀಸಿ ತಿನ್ನುವುದು ಒಳೆಯದು ಎಂದರು.

ಸಿಡಿಪಿಒ ಪ್ರಿಯಾ ಆಗ್ನೇಸ್ ಚಾಕೋ ಪ್ರಾಸ್ತವಿಸಿ ಮಾತನಾಡಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪೋಷಣ್ ಅಭಿಯಾನದ ಅಡಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲರ ಆರೋಗ್ಯವನ್ನು ಕಾಪಾಡುವುದು ಇದರ ಮುಖ್ಯ ಉದ್ದೇಶವಾಗಿದೆ.
ನಮ್ಮ ಅಂಗನವಾಡಿ ನಮ್ಮ ಜವಾಬ್ದಾರಿ” ಎಂಬ ಘೋಷವಾಕ್ಯದೊಂದಿಗೆ ಪೋಷಣ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದ ಆರಂಭದಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಕಮಿತಿ ಸದಸ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜತ್, ಸಮಾಜ ಕಲ್ಯಾಣ ಇಲಾಖೆಯ ಧೀರಜ್,
ಅಂಗನವಾಡಿ ಕಾರ್ಯಕರ್ತೆಯರು, ಇಲಾಖಾ ಅಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು.

ಸಿಡಿಪಿಒ ಪ್ರಿಯಾ ಆಗ್ನೇಸ್  ಸ್ವಾಗತಿಸಿ,  ಅಂಗನವಾಡಿ ಕಾರ್ಯರ್ಕತೆ ದಮಯಂತಿ ಬಳಗ ಪ್ರಾರ್ಥಿಸಿ, ವಲಯ ಹಿರಿಯ ಮೇಲ್ವಿಚಾರಕಿಗಳಾದ ವಾಣಿಶ್ರೀ ವಂದಿಸಿ, ಕ್ಯಾತಾಯಿನಿ ನಿರೂಪಿಸಿದರು. ವಿವಿಧ ಬಗೆಯ 59 ಪೌಷ್ಟಿಕ ಆಹಾರ ಅಭಿಯಾನದಲ್ಲಿತ್ತು.   ಸಣ್ಣ ಮಕ್ಕಳಿಗೆ ಅನ್ನ ಪ್ರಶಾನ, ಗರ್ಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

Related posts

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಕಲ್ಮಂಜ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವಿರುದ್ಧ ಆಧಾರ ರಹಿತ ಅಪಪ್ರಚಾರ ಆರೋಪ ಮುಖ್ಯ ಕಾರ್ಯನಿರ್ವಾಹಕರಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!