24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ತೋಟಕ್ಕೆ ನುಗ್ಗಿದ ಕಾಡಾನೆ: ಕೃಷಿಗೆ ಹಾನಿ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಳೆಂಜಿರೋಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅ.9ರಂದು ತಡರಾತ್ರಿ ತೋಟಗಳಿಗೆ ನುಗ್ಗಿದ ಕಾಡಾನೆಯೊಂದು ಕೃಷಿ ಬೆಳೆಗಳನ್ನು ಹಾನಿಗೊಳಿಸಿದೆ.

ಕುಳೆಂಜಿರೋಡಿಯ ಮಹೇಂದ್ರ ಪರಾಂಜಪೆ ಹಾಗೂ ರಾಮಚಂದ್ರ ಭಟ್ ಎಂಬವರ ತೋಟಗಳಿಗೆ ತಡರಾತ್ರಿ ದಾಳಿ ನಡೆಸಿದ ಕಾಡಾನೆ, ಎರಡು ತೆಂಗಿನ ಮರಗಳು, ಹತ್ತಕ್ಕೂ ಅಧಿಕ ಅಡಕೆ ಮರಗಳು ಹಾಗೂ ಬಾಳೆ ಕೃಷಿಗೆ ಹಾನಿ ಉಂಟುಮಾಡಿದೆ.

ಕುಳೆಂಜಿರೋಡಿ ಪರಿಸರದಲ್ಲಿ ಕಾಡಾನೆಗಳ ಸಂಚಾರ ಹಾಗೂ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು ಹೆಚ್ಚುತ್ತಿರುವುದು ಸ್ಥಳೀಯ ಕೃಷಿಕರಲ್ಲಿ ಆತಂಕ ಮೂಡಿಸಿದೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ಕಾಡಾನೆಗಳು ತೋಟಗಳಿಗೆ ನುಗ್ಗುತ್ತಿರುವುದರಿಂದ ಕೃಷಿ ಚಟುವಟಿಕೆಗಳ ಜತೆಗೆ ಮನೆಗಳಿಂದ ಹೊರಬರಲೂ ಸ್ಥಳೀಯರು ಭಯಪಡುವಂತಾಗಿದೆ.

ಕೃಷಿ ಬೆಳೆಗಳಿಗೆ ಹಾನಿಯಾಗುವುದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಕೃಷಿಕರು, ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕಾಡಾನೆಗಳ ಸಂಚಾರದ ಬಗ್ಗೆ ನಿಗಾ ವಹಿಸಿ, ಜನವಸತಿ ಪ್ರದೇಶಗಳಿಗೆ ಹಾಗೂ ಕೃಷಿ ತೋಟಗಳಿಗೆ ಆನೆಗಳು ನುಗ್ಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿಗೊಳಗಾದ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಕಾಡಾನೆಗಳ ಹಾವಳಿ ಇದೇ ರೀತಿ ಮುಂದುವರಿದರೆ ಕೃಷಿಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ.

Related posts

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!