24.6 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ರೇಂಜರ್ಸ್ ವಿಭಾಗ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.

ಶಿಬಿರವನ್ನು ರೋಟರಿ ಕ್ಲಬ್ ನ ಅಧ್ಯಕ್ಷ ಶ್ರೀಧರ ಕೆ.ವಿ, ಅವರು ಉದ್ಘಾಟಿಸಿದರು .ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇದರ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್ ಕೋಡಿತ್ತಿಲ್ ವಹಿಸಿದ್ದರು.

ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿಗಳಾದ ಡಾ ರಾಘವೇಂದ್ರ ಪಿದಮಲೆ, ಚಾರ್ಮಾಡಿಯ ನಿವೃತ್ತ ಅಂಚೆಪಾಲಕರಾದ ಯಶವಂತ ನಾಯಕ್, ಶ್ರೀ ಕ್ಷೇತ್ರ ಮತ್ರೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇದರ ಆಡಳಿತ ಮೊಕ್ತೇಸರರಾದ ಯಶೋಧರ ವಳಸಿರಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್.ವಿಭಾಗದ ಶಿಭಿರಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಙರೂ, ರೋಟರಿ ಕ್ಲಬ್ ಬೆಳ್ರಂಗಡಿಯ ಸದಸ್ಯರೂ ಆದ . ಡಾ ರಮೇಶ್ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ಕುಮಾರಿ ಅನಿಕ್ಷಾ ಅವರ ಪ್ರಾರ್ಥನೆಯೊಂದಿಗೆ ಆರಂಭವಾದರೆ , ಕುಮಾರಿ ತೇಜಸ್ವಿನಿ ಸ್ವಾಗತಿಸಿದರು.ಕುಮಾರಿ ಜನಿಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರೆ , ಚಂದನ್ ಅವರು ವಂದನಾರ್ಪಣೆಗೈದರು.
ಈ ಶಿಬಿರದಲ್ಲಿ 115 ಜನರ ಕಣ್ಣನ್ನು ಪರೀಕ್ಷಿಸಲಾಯಿತು. ಸುಮಾರು57 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು . ಹಾಗೂ ಹತ್ತು ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಬರುವಂತೆ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಸದಸ್ಯರಾದ ಮೆ.ಜ.(ನಿ) ಎಂ.ವಿ.ಭಟ್, ಅನಂತ ಭಟ್ ಮಚ್ಚಿಮಲೆ, ಪ್ರಕಾಶ ನಾರಾಯಣ್ ಮತ್ತಿತರರು ಹಾಜರಿದ್ದರು

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya
error: Content is protected !!