24.6 C
ಪುತ್ತೂರು, ಬೆಳ್ತಂಗಡಿ
October 11, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ವಹಿಸಿದ್ದರು.

ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಡಾ| ಶಿವಾನಂದ ಸ್ವಾಮಿ ಮಾತನಾಡಿ ಒಬ್ಬ ವ್ಯಕ್ತಿಗೆ ಮಾನಸಿಕ ಕಾಯಿಲೆ ಬರಬಹುದಾದ ಸಾಧ್ಯತೆಗಳ ಕಾರಣಗಳು, ವಿಧಗಳು, ಲಕ್ಷಣಗಳು, ಪರಿಹಾರಗಳನ್ನು ವಿವರಿಸಿ, ದೈಹಿಕವಾಗಿ ನಾವೆಷ್ಟೇ ಆರೋಗ್ಯವಾಗಿದ್ದರೂ, ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ ಎಲ್ಲವೂ ಶೂನ್ಯ. ನಮ್ಮ ಜೀವನದಲ್ಲಿ ನಾವು ಸದೃಢರಾಗಿರಬೇಕೆಂದರು. ಮಾನಸಿಕ ಕಾಯಿಲೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಮಾನಸಿಕ ಆರೋಗ್ಯವಿಲ್ಲದಿದ್ದರೆ ಒಬ್ಬ ಮನುಷ್ಯ ನೆಮ್ಮದಿಯಾಗಿ, ಸುಖವಾಗಿ ಬಾಳಲು ಸಾಧ್ಯವಿಲ್ಲ. ಇದಕ್ಕೆ ಧ್ಯಾನ ಮತ್ತು ದೈವಿಕ ಶಕ್ತಿಯು ಮುಖ್ಯ ಪಾತ್ರ ವಹಿಸುತ್ತದೆ. ಪ್ರೀತಿ ಮತ್ತು ತಿಳುವಳಿಕೆಯಿಂದ ಪರಸ್ಪರರ ಮಾನಸಿಕ ಆರೋಗ್ಯವನ್ನು ಬೆಂಬಲಿಸೋಣ ಎಂದರು.

ಸಂಸ್ಥೆಯ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ., ಸಿಯೋನ್ ಚಾಪ್ಲಿಯನ್ ರೆ. ಫಾ. ಡಾ. ಮೆಲ್ವಿನ್ ಡಿ’ಸಿಲ್ವ, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ಉಪನ್ಯಾಸಕ ಮಿರಿಯಂ ಜೇಕಬ್, ಸಿಯೋನ್ ಸಂಸ್ಥೆಯ ಸಿಬ್ಬಂದಿ ದಾದಿ ಮಿಷಾ ಕುರಿಯನ್, ಆಶ್ರಮ ನಿವಾಸಿಯಾದ ರಾಜು ಉಪಸ್ಥಿತರಿದ್ದರು.
ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ನ ವಿದ್ಯಾರ್ಥಿಗಳು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ ಮಂಗಳೂರಿನ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!