34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಕಾರ್ಯಕ್ರಮ

ವೇಣೂರು: ಇಲ್ಲಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರ್ಯಾಂಡ್ ಪೇರೆಂಟ್ಸ್ ಡೇ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಗೂ ಅಜ್ಜ–ಅಜ್ಜಿಯರ ಸಮ್ಮುಖದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ದೂರದ ಊರುಗಳಿಂದಲೂ ಆಗಮಿಸಿದ ಅಜ್ಜ–ಅಜ್ಜಿಯರು ತಮ್ಮ ಅಮೂಲ್ಯ ಸಮಯವನ್ನು ಮೊಮ್ಮಕ್ಕಳಿಗಾಗಿ ಮೀಸಲಿಟ್ಟು, ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಮೊಮ್ಮಕ್ಕಳೊಂದಿಗೆ ನಲಿದು, ಆಟವಾಡಿ ಸಂಭ್ರಮಿಸಿದ ಅವರು ತಮ್ಮ ಪ್ರೀತಿ, ಆತ್ಮೀಯತೆ ಹಾಗೂ ಆಶೀರ್ವಾದಗಳ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.

ಈ ಸಂದರ್ಭದಲ್ಲಿ ಶಾಲೆಗೆ AI ಸ್ಮಾರ್ಟ್ ಟಿವಿಯ ಅಗತ್ಯವಿರುವ ಕುರಿತು ಶಾಲೆಯ ವತಿಯಿಂದ ಮಾಡಲಾದ ಮನವಿಗೆ ಸ್ಪಂದಿಸಿದ ಹಲವು ಅಜ್ಜ–ಅಜ್ಜಿಯರು ತಮ್ಮ ಕೈಲಾದಷ್ಟು ಆರ್ಥಿಕ ಸಹಾಯವನ್ನು ನೀಡಿದರು. ಅವರ ಈ ಉದಾರ ಸಹಕಾರವು ವಿದ್ಯಾರ್ಥಿಗಳ ಕಲಿಕೆಯನ್ನು ಇನ್ನಷ್ಟು ಆಸಕ್ತಿದಾಯಕ ಹಾಗೂ ಪರಿಣಾಮಕಾರಿಯಾಗಿಸಲು ಮಹತ್ವದ ಕೊಡುಗೆಯಾಗಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್., ಸಂಚಾಲಕ ಅಶ್ವಿತ್ ಕುಲಾಲ್, ಶಾಲೆಯ ಅಕಾಡೆಮಿಕ್ ಅಡ್ವೈಸರ್ ಶ್ರೀಮತಿ ಉಷಾ, ಮಾಸ್ಟರ್ ಅಮರ್ತ್ಯ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್. ಹಾಗೂ ಮೊಂಟೆಸ್ಸರಿ ಶಿಕ್ಷಕಿ ಶ್ರೀಮತಿ ಸೈಬತ್ ಮತ್ತು ಕುಮಾರಿ ಯಕ್ಷಣಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮೊಂಟೆಸ್ಸರಿ ಶಿಕ್ಷಕಿ ಶ್ರೀಮತಿ ಸೌಮ್ಯ ನಿರೂಪಿಸಿದರು.

Related posts

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಪಡಂಗಡಿ ಪೊಯ್ಕೆಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ವೀರೇಂದ್ರ ಶೆಟ್ಟಿ, ಅಧ್ಯಕ್ಷರಾಗಿ ಸುನಿಲ್ ಕುಲಾಲ್

Suddi Udaya

ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!