ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ರೂ.1 ಕೋಟಿ 10 ಲಕ್ಷ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗಿದೆ.
ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಉಚಿತ ಡಯಾಲಿಸಿಸ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್.ಡಿ.ಎಂ. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ.) ಜನಾರ್ದನ ಎಂ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












