ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026′ ಹಾಗೂ ಗೋ ಪೂಜಾ ಉತ್ಸವ ನ. 8ರ ಭಾನುವಾರದಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಬೆಳಗ್ಗೆ 8 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ವ್ಯಸನಮುಕ್ತ ಬೆಳ್ತಂಗಡಿ ಸಂದೇಶ ಸಾರುವ ಮ್ಯಾರಥಾನ್‌ನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಇದರೊಂದಿಗೆ ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶವಿರುವ ಬಾಲೆ ಪಿಲಿ ಹುಲಿವೇಷ ಸ್ಪರ್ಧೆ ಹಾಗೂ ರೀಲ್ಸ್ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ಗೋ ಪೂಜಾ ಉತ್ಸವ ಹಾಗೂ ದೇವದಾಸ್ ಕಾಪಿಕಾಡ್ ವಿರಚಿತ ‘ಯಾನ್ ಒರಿ ಬರೊಲಿಯ’ ನಾಟಕವು ಬಾಲೆ ಚಾ ಪರ್ಕ ತಂಡದವರಿಂದ ಪ್ರದರ್ಶನಗೊಳ್ಳಲಿದೆ. ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಒಳಗೊಂಡಿರುವ ಈ ಉತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಆತ್ಮೀಯ ಆಮಂತ್ರಣ ನೀಡಲಾಗಿದೆ.












