34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮುದ್ರ ಪಾಲಾಗಿದ್ದ ಉಜಿರೆಯ ವಿದ್ಯಾರ್ಥಿ ಶೋಭಿತ್ ಮೃತ ದೇಹ ಪತ್ತೆ

ಬೆಳ್ತಂಗಡಿ:  ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ  ತೆರಳಿದ್ದ ವೇಳೆ ಉಜಿರೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದರು.   ಅ. 12ರಂದು ನಾಪತ್ತೆಯಾಗಿದ್ದ ಸ್ಥಳದಲ್ಲೇ ಶೋಭಿತ್ ಮೃತದೇಹ ಪತ್ತೆಯಾಗಿದೆ.

ಕುತ್ತಾರಿನ ಕೊರಗಜ್ಜನ ಸನ್ನಿಧಾನಕ್ಕೆ ಬಂದಿದ್ದ ಒಂಬತ್ತು ವಿದ್ಯಾರ್ಥಿಗಳ ತಂಡವು ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿತ್ತು. ಈ ವೇಳೆ ಶೋಭಿತ್ ಹಾಗೂ ಆಕಾಶ್ ಸಮುದ್ರಕ್ಕಿಳಿದಿದ್ದು, ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ತಕ್ಷಣ ಎಚ್ಚೆತ್ತುಕೊಂಡ ಆಕಾಶ್ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದರೆ, ಶೋಭಿತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಘಟನೆ ನಡೆದ ತಕ್ಷಣವೇ ಎಸ್‌ಡಿಆರ್‌ಎಫ್ (SDRF), ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಕೊನೆಗೆ ಉಳ್ಳಾಲ ಕೋಟೆಪುರದ ಮೀನುಗಾರರ ನೆರವಿನೊಂದಿಗೆ ದೋಣಿಯ ಮೂಲಕ ಶೋಭಿತ್ ಅವರ ಮೃತದೇಹವನ್ನು ದಡಕ್ಕೆ ತರಲಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

Related posts

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya
error: Content is protected !!