ಉಜಿರೆ: WWF-India ಆಯೋಜಿಸಿದ Wild Wisdom Global Challenge (WWGC) 2026 ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ 9ನೇ ತರಗತಿಯ ಮೊಹಮ್ಮದ್ ಶಯಾನ್ 60ರಲ್ಲಿ 57 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ 8ನೇ ತರಗತಿಯ ರಕ್ಷನ್ ಪಿ.ಎನ್. 56 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ 7,8,9ನೇ ತರಗತಿಯ ಒಟ್ಟು 72 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದ ಇಬ್ಬರೂ ವಿದ್ಯಾರ್ಥಿಗಳು ರಾಜ್ಯಮಟ್ಟದ ಸುತ್ತಿಗೆ ಆಯ್ಕೆಯಾಗಿದ್ದಾರೆ. ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ.ಕೆ ಮಾರ್ಗದರ್ಶನ ನೀಡಿರುತ್ತಾರೆ. ಇವರ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.












