34.2 C
ಪುತ್ತೂರು, ಬೆಳ್ತಂಗಡಿ
October 12, 2026
Uncategorized

ಎಸ್‌ಎನ್ ಮೂಡಬಿದ್ರಿ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಮೂಡುಬಿದಿರೆ,: ಎಸ್‌ಎನ್ ಮೂಡಬಿದ್ರಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರೋಡಿ ಇಲ್ಲಿ ಉದ್ಘಾಟನೆಗೊಂಡಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಉದ್ಘಾಟಕರಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಎನ್‌ಎಂ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸರಳಾ ಉದಯ್, ಸಂಚಾಲಕರು, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮೂಡಬಿದಿರೆ, ರತ್ನಾಕರ್ ಬುಣ್ಣನ್ ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಮರೋಡಿ, ಜಯರಾಜ್ ಕಾಬಯ , ಅಂಗಡಿಬೆಟ್ಟು ಗುತ್ತು ಉಪಸ್ಥಿತರಿದ್ದರು.
ಅದೇ ರೀತಿ ಕಮಲಾಕ್ಷ ಕಾಮತ್, ನಿವೃತ್ತ ಲೆಕ್ಕಪರಿಶೋಧಕರು ಸಾಯಿಧಾಮ, ಕಾರ್ಕಳ, ಎಂ. ಪದ್ಮರಾಜ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರು, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರೋಡಿ, ಜಗದೀಶ್ ಹೆಗ್ಡೆ, ಶಾಲಾ ಕಾರ್ಯನಿರ್ವಹಣಾಧಿಕಾರಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸುರೇಶ್ ಅಂಚನ್, ಅಧ್ಯಕ್ಷರು, ಸಾರ್ವಜನಿಕ ಗಣೇಶೋತ್ಸವ ಸಮಿತಿ, ಪಿಜತಕಟ್ಟೆ, ಶ್ರೀಮತಿ ನೊರೋನ್ಹ ತರೀನಾ ರೀಟ ಪ್ರಾಂಶುಪಾಲರು ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದರೆ, ಶಿವನಿಂಗಪ್ಪ ಗಾಣಗೇರಾ ಮುಖ್ಯೋಪಾಧ್ಯಾಯರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರೋಡಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಎನ್‌ಎಸ್‌ಎಸ್ ಘಟಕ–1ರ ಕಾರ್ಯಕ್ರಮಾಧಿಕಾರಿ ರಾಮಪ್ರಸಾದ್ ಎಂ.ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಹಾಗೂ ಘಟಕ–2ರ ಕಾರ್ಯಕ್ರಮಾಧಿಕಾರಿಯಾಗಿ ಗೋಪಾಲಕೃಷ್ಣ ಕೆ.ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಾದ ಭೂವಿಕ ಹಾಗೂ ರಾಜೇಶ್ವರಿ ಪ್ರಾರ್ಥನೆಯನ್ನು ಮಾಡಿದರು.
ಸ್ನೇಹ ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು. ಸಂಪೂರ್ಣ ಕಾರ್ಯಕ್ರಮವನ್ನು ಶ್ರಾವಣ್ಯ ನಿರೂಪಿಸಿದರು.
ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸಮಾಜ ಸೇವೆ, ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ನೈರ್ಮಲ್ಯ, ವ್ಯಕ್ತಿತ್ವ ವಿಕಸನ, ನಾಯಕತ್ವ ಹಾಗೂ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಸ್ಥಳೀಯ ಸಮುದಾಯದೊಂದಿಗೆ ಬೆರೆತು ವಿವಿಧ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Related posts

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಸಾಧನೆಯ ಸಂಭ್ರಮದಲ್ಲಿ ಸೈಂಟ್ ಮೇರಿಸ್ ಶಾಲೆ: ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಅದ್ಧೂರಿ ಅಭಿನಂದನೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!