34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ. 8: ಬೆಳ್ತಂಗಡಿಯಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026: ಗೋ ಪೂಜಾ ಉತ್ಸವ, ಮ್ಯಾರಥಾನ್, ತುಡರ್ ನೃತ್ಯ ಸ್ಪರ್ಧೆ, ಬಾಲೆ ಪಿಲಿ ಹುಲಿವೇಷ ಸ್ಪರ್ಧೆ ಹಾಗೂ ರೀಲ್ಸ್ ಸ್ಪರ್ಧೆಗಳು

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026′ ಹಾಗೂ ಗೋ ಪೂಜಾ ಉತ್ಸವ ನ. 8ರ ಭಾನುವಾರದಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.

ಬೆಳಗ್ಗೆ 8 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ವ್ಯಸನಮುಕ್ತ ಬೆಳ್ತಂಗಡಿ ಸಂದೇಶ ಸಾರುವ ಮ್ಯಾರಥಾನ್‌ನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಇದರೊಂದಿಗೆ ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶವಿರುವ ಬಾಲೆ ಪಿಲಿ ಹುಲಿವೇಷ ಸ್ಪರ್ಧೆ ಹಾಗೂ ರೀಲ್ಸ್ ಸ್ಪರ್ಧೆಗಳು ನಡೆಯಲಿವೆ. ಇದರ ಜೊತೆಗೆ ಗೋ ಪೂಜಾ ಉತ್ಸವ ಹಾಗೂ ದೇವದಾಸ್ ಕಾಪಿಕಾಡ್ ವಿರಚಿತ ‘ಯಾನ್ ಒರಿ ಬರೊಲಿಯ’ ನಾಟಕವು ಬಾಲೆ ಚಾ ಪರ್ಕ ತಂಡದವರಿಂದ ಪ್ರದರ್ಶನಗೊಳ್ಳಲಿದೆ. ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಒಳಗೊಂಡಿರುವ ಈ ಉತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಆತ್ಮೀಯ ಆಮಂತ್ರಣ ನೀಡಲಾಗಿದೆ.

Related posts

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya
error: Content is protected !!