28.4 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ

ನೆರಿಯ: ಗ್ರಾಮದ ಪರಂದಾಡಿ ಪಾದೆಗುಡ್ಡೆ ಜನತಾ ಕಾಲೋನಿ ಪ್ರದೇಶಕ್ಕೆ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ನೆರಿಯ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಲೋನಿಯ ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ತೀವ್ರ ತೊಂದರೆ ಎದುರಿಸುವಂತಾಗಿದೆ. ಹಲವು ದಿನಗಳಿಂದ ನೀರಿಲ್ಲದೆ ಪರದಾಡುತ್ತಿದ್ದರೂ ಸಮಸ್ಯೆಗೆ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ಸಂಜೆಯೊಳಗೆ ನೀರು ಪೂರೈಕೆ ಆರಂಭವಾಗಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೆ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.ಬಳಿಕ ಸ್ಥಳಕ್ಕೆ ಆಗಮಿಸಿದ ಪಿಡಿಒ, ಶೀಘ್ರದಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಈ ಭರವಸೆಯ ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.

ನೀರಿನ ಟ್ಯಾಂಕ್‌ನಲ್ಲಿ ಮಣ್ಣು, ಕೆಸರು!ಇದೇ ವೇಳೆ ಗ್ರಾಮದ ಪಾದೆಗುಡ್ಡೆ ಪ್ರದೇಶದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ನೊಳಗೆ ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಕೆಸರು ತುಂಬಿಕೊಂಡಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿಗೆ ಪೂರೈಸುವ ಕುಡಿಯುವ ನೀರಿನ ಟ್ಯಾಂಕ್‌ನ ನಿರ್ವಹಣೆ ಹಾಗೂ ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಟ್ಯಾಂಕ್‌ನಲ್ಲಿ ಕೆಸರು ತುಂಬಿಕೊಂಡಿರುವಾಗ ಅದನ್ನು ಸ್ವಚ್ಛಗೊಳಿಸಿ, ನೀರಿನ ಗುಣಮಟ್ಟವನ್ನು ಪರಿಶೀಲಿಸದೆ ಪೂರೈಕೆ ಮಾಡುವುದು ಜನರ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ನೀರನ್ನು ಕುಡಿದು ಜನರ ಆರೋಗ್ಯದಲ್ಲಿ ಏರುಪೇರಾದರೆ ಪಂಚಾಯಿತಿ ಆಡಳಿತವೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Related posts

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!