ಮುಂಡೂರು: ಮುಂಡೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಶಾರದಾಂಬ ಭಜನಾ ಮಂಡಳಿ, ಶ್ರೀ ಶಾರದಾಂಬ ಯುವಕ ಮಂಡಲದ ಆಶ್ರಯದಲ್ಲಿ ನವರಾತ್ರಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮ ಅ. 11ರಿಂದ ಅ.19ರ ವರೆಗೆ ಶ್ರೀ ದೇವರ ಸನ್ನಿಧಿಯಲ್ಲಿ 9ದಿನಗಳಲ್ಲಿ ನಡೆಯಲಿದ್ದು ಅ. 11 ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ ಭಟ್ ಎಂ. ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮಾನಂದ ಸಾಲಿಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೀವ ಸಾಲಿಯಾನ್, ಶ್ರೀ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಧರ ಅಂಚನ್, ಕಾರ್ಯದರ್ಶಿ ಕೇಶವ ಮೂಲ್ಯ, ಕೋಶಾಧಿಕಾರಿ ಆನಂದ ಆಚಾರ್ಯ, ಮಾಜಿ ಅಧ್ಯಕ್ಷ ವಸಂತ ಪೂಜಾರಿ, ಅಭಿವೃದ್ಧಿ ಆರ್ಚಕ ರಾಘವೇಂದ್ರ ಭಟ್, ಶ್ರೀ ಶಾರದಾಂಬ ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಊರವರು ಭಕ್ತರು ಉಪಸ್ಥಿತರಿದ್ದರು.
ಪ್ರಥಮ ದಿನ ಬೆಳ್ತಂಗಡಿ ಶ್ರೀ ಸತ್ಯಸಾಯಿ ಭಜನಾ ಮಂಡಳಿ ಸದಸ್ಯರು ಭಜನಾ ಸೇವೆ ನಡೆಸಿ ಕೊಟ್ಟರು.












