ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ. 13 ರಂದು ಸಂಜೆ 6 ಗಂಟೆಯಿಂದ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಶ್ರೀಮತಿ ಕಾಶಿ ಬಾಬು ಶೆಟ್ಟಿಯವರ ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ನವಶಕ್ತಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಎಂಆರ್ಜಿ ಗ್ರೂಪ್ನ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ, ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹಾಗೂ ಕಾರ್ಕಳ ಜ್ಞಾನಸುಧಾ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅವರು ಭಾಗವಹಿಸಲಿದ್ದಾರೆ.












