24.2 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಿಂಚಿದ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ

ಗುರುವಾಯನಕೆರೆ: ಗುರುವಾಯನಕೆರೆ ಶಕ್ತಿನಗರದ ವಿದ್ವತ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮಿತ್ ಶೆಟ್ಟಿ ಅವರು ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅ.11ರಂದು ಇಂಡಿಯಾ ಕರಾಟೆ ಡು-ಕೆನ್ರಿಯುಕಾನ್ ಶೋಟೊಕಾನ್ ಸ್ಟೈಲ್ ವತಿಯಿಂದ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ 2ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅವರು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಸುಮಿತ್ ಅವರು ಕರಾಟೆ ಕ್ಷೇತ್ರದಲ್ಲಿ ಈಗಾಗಲೇ 198 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದು, ತಮ್ಮ ಪ್ರತಿಭೆ ಮತ್ತು ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ನಾಲ್ಕು ಬಾರಿ ಭಾಗವಹಿಸಿರುವ ಅವರು, ಶ್ರೀಲಂಕಾ, ಮಲೇಷ್ಯಾ, ಮಹಾರಾಷ್ಟ್ರ, ಭೂತಾನ್ ಮತ್ತು ಒಡಿಶಾದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮಿನಿ ಒಲಿಂಪಿಕ್ಸ್‌ನಲ್ಲಿಯೂ ಪಾಲ್ಗೊಂಡು ಕರಾಟೆ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ.

ಒಂದನೇ ತರಗತಿಯಿಂದಲೇ ಕರಾಟೆ ತರಬೇತಿ ಆರಂಭಿಸಿದ ಸುಮಿತ್, ನಿರಂತರ ಅಭ್ಯಾಸ, ಶಿಸ್ತು ಮತ್ತು ಪರಿಶ್ರಮದ ಮೂಲಕ ಈ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ. ಕಳೆದ ತಿಂಗಳು ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿಯೂ ಅವರು ಯಶಸ್ಸು ಗಳಿಸಿದ್ದರು.

ಮಂಗಳೂರಿನ ಸುರತ್ಕಲ್ ಮೂಲದ ಸುಮಿತ್ ಶೆಟ್ಟಿ ಅವರು ಸುಭಾಷ್ ಶೆಟ್ಟಿ ಮತ್ತು ಶೋಭಾ ಶೆಟ್ಟಿ ದಂಪತಿಯ ಪುತ್ರರಾಗಿದ್ದಾರೆ. ಕರಾಟೆ ಕ್ರೀಡೆಯ ಮೇಲಿನ ಅವರ ಅಪಾರ ಆಸಕ್ತಿ, ಬದ್ಧತೆ ಹಾಗೂ ಸಾಧಿಸುವ ಛಲ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ. ಸುಮಿತ್ ಅವರ ಈ ಗಮನಾರ್ಹ ಸಾಧನೆಗೆ ಅಭಿನಂದನೆ ಸಲ್ಲಿಸಿದ ವಿದ್ವತ್ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಪ್ರೊ.ಸುಭಾಷ್ಚಂದ್ರ ಶೆಟ್ಟಿ, ಶೈಕ್ಷಣಿಕ ನಿರ್ದೇಶಕರಾದ ಪ್ರೊ.ಗಂಗಾಧರ ಇ.ಎಂ. ಹಾಗೂ ಪ್ರಾಂಶುಪಾಲರಾದ ಬಾಲಕೃಷ್ಣ ನಾಯಕ್ ಅವರು, ಅವರ ಪ್ರತಿಭೆ, ಸಮರ್ಪಣೆ ಮತ್ತು ಕ್ರೀಡಾಸ್ಫೂರ್ತಿಯನ್ನು ಶ್ಲಾಘಿಸಿದ್ದಾರೆ.

Related posts

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!