33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹ

ಬೆಳ್ತಂಗಡಿ: ಬೆಳ್ತಂಗಡಿ: ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಘಟನೆ ನಡೆದು 7 ದಿನಗಳು ಕಳೆದಿದ್ದರೂ, ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿರುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗದಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ – ಬಜರಂಗದಳ, ಬೆಳ್ತಂಗಡಿ ಪ್ರಖಂಡ ರವರು ಬೆಳ್ತಂಗಡಿ ಉಪವಿಭಾಗ ಉಪಾಧೀಕ್ಷಕರು ಹಾಗೂ ಬೆಳ್ತಂಗಡಿ ವೃತ್ತ ನಿರೀಕ್ಷಕರ ಮೂಲಕ ಮನವಿ ಸಲ್ಲಿಸಿದ್ದಾರೆ.

ಘಟನೆ ನಡೆದು ಒಂದು ವಾರ ಕಳೆದಿದ್ದರೂ ತನಿಖೆಯ ಪ್ರಗತಿ ಹಾಗೂ ಆರೋಪಿಗಳ ಬಂಧನದ ಕುರಿತು ಸ್ಪಷ್ಟತೆ ಇಲ್ಲದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ನಿಷ್ಪಕ್ಷಪಾತ ಹಾಗೂ ತ್ವರಿತ ತನಿಖೆ ನಡೆಸಬೇಕು. ಈ ಕೃತ್ಯದ ಹಿಂದೆ ಇರುವವರನ್ನು ಗುರುತಿಸಿ, ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಆರೋಗ್ಯ ಕ್ಲಿನಿಕ್‌ಗಳು ಸಾರ್ವಜನಿಕರಿಗೆ ಅಗತ್ಯವಾದ ವೈದ್ಯಕೀಯ ಸೇವೆ ಒದಗಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸ್ಥಳಗಳಿಗೆ ಬೆಂಕಿ ಹಚ್ಚುವ ಘಟನೆಗಳು ವೈದ್ಯರು, ರೋಗಿಗಳು ಹಾಗೂ ಸಾರ್ವಜನಿಕರಲ್ಲಿ ಭಯ ಮತ್ತು ಆತಂಕದ ವಾತಾವರಣ ಸೃಷ್ಟಿಸುತ್ತವೆ. ಆದ್ದರಿಂದ, ಡಾ. ಪ್ರದೀಪ್ ಅವರಿಗೂ ಅವರ ಕ್ಲಿನಿಕ್‌ಗೂ ಅಗತ್ಯ ಭದ್ರತೆ ಒದಗಿಸುವುದರ ಜೊತೆಗೆ, ಘಟನೆಯ ನೈಜ ಕಾರಣವನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.

ತನಿಖೆ ಮತ್ತು ಆರೋಪಿಗಳ ಬಂಧನದಲ್ಲಿ ಸೂಕ್ತ ಪ್ರಗತಿ ಕಂಡುಬರದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಪೂರ್ವಸೂಚನೆ ನೀಡಿ, ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ದುರ್ಗಾ ವಾಹಿನಿ ಹಾಗೂ ಮಾತೃಶಕ್ತಿ ಘಟಕಗಳ ಸಹಯೋಗದಲ್ಲಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘಟನೆ ತಿಳಿಸಿದೆ. ಸಾರ್ವಜನಿಕರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತಕ್ಷಣ ಸ್ಪಂದಿಸಿ, ಪ್ರಕರಣದ ತನಿಖೆಯಲ್ಲಿ ಅಗತ್ಯ ಪ್ರಗತಿ ಸಾಧಿಸಬೇಕು ಹಾಗೂ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು ಎಂದು ವಿಶ್ವ ಹಿಂದೂ ಪರಿಷತ್-ಬಜರಂಗದಳ, ಬೆಳ್ತಂಗಡಿ ಪ್ರಖಂಡ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ವಿಎಚ್ ಪಿ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ವಿಷ್ಣು ಮರಾಟೆ, ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಸಂಯೋಜಕ್ ಪ್ರಭಾಕರ್ ಮಚ್ಚಿನ, ಸಹಕಾರ್ಯದರ್ಶಿ ಸತೀಶ್ ಮರಕಡ, ಸಹಸಂಯೋಜಕ್ ಗೌರವ್, ಉಪಾಧ್ಯಕ್ಷ ವೆಂಕಟೇಶ್ ಭಟ್ ಬೆಳಾಲು, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ, ಬಿಎಂಎಸ್ ಕಟ್ಟಡ ಕಾರ್ಮಿಕರ ರಾಜ್ಯ ಕಾರ್ಯದರ್ಶಿ ಕುಮಾರನಾಥ ಶೆಟ್ಟಿ, ಧಾರ್ಮಿಕ ಮುಖಂಡರಾದ ಪದ್ಮನಾಭ ಶೆಟ್ಟಿಗಾರ್, ಡಿ. ಕಿರಣಚಂದ್ರ ಪುಷ್ಪಗಿರಿ, ರಾಘವೇಂದ್ರ, ಪ್ರಮೋದ್ ದಿಡುಪೆ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಎಸ್‌ಡಿಎಂ ಆರೋಹಮ್‌ 2026 ಉದ್ಘಾಟನೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
error: Content is protected !!