24.2 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ : ದಕ್ಷಿಣ ಕನ್ನಡ ಜಿಲ್ಲೆಯ ಆರು ಶಿಕ್ಷಕರಿಗೆ ‘ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’

ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ ಶಿಕ್ಷಕರಿಗೆ ‘ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಅಕ್ಟೋಬರ್ 13ರಂದು ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೂ ಮುನ್ನ ಅತಿಥಿ ಗಣ್ಯರು ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ಗೆ ಭೇಟಿ ನೀಡಿ ಸಿರಿಯ ಕಾರ್ಯವೈಖರಿಗಳನ್ನು ಮೆಚ್ಚಿದರು.

ರಾಜ್ಯ ಕುಷ್ಮಾ ಸಮಿತಿಯ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ರಾಜ್ಯ ಕುಷ್ಮಾ ಸಮಿತಿಯ ಗೌರವಾಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರುಮ ರಾಜ್ಯ ಕುಷ್ಮಾ ಸಮಿತಿಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಎಸ್‌ಡಿಎಂ ಶಿಕ್ಷಣ ಸಂಸ್ಥೆ, ಉಜಿರೆಯ ಕಾರ್ಯದರ್ಶಿ ಪ್ರೊ. ಸತೀಶ್ಚಂದ್ರ ಉಪಸ್ಥಿತರಿದ್ದರು.

ರಾಜ್ಯ ಕುಷ್ಮಾ ಸಮಿತಿಯ ಗೌರವಾಧ್ಯಕ್ಷರಾದ ಡಾ. ಕೆ. ಸಿ. ನಾಯ್ಕ ಮತ್ತು ಕೆ. ರಾಧಾಕೃಷ್ಣ ಶೆಣೈ, ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗೂ ಮೈಸೂರಿನ ಜಂಟಿ ಕಾರ್ಯದರ್ಶಿ ವಿಶ್ವನಾಥ ಶೇಷಾಛಲ, ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಸಮಿತಿಯ ಗೌರವಾಧ್ಯಕ್ಷ ಡಾ. ಸಂಜೀವ ರೈ ಉಪಸ್ಥಿತರಿದ್ದರು.

ಈ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ. ಅನಿಲ್ ಮಸ್ಕರೇನಸ್, ಮೂಡುಬಿದಿರೆಯ ಎಕ್ಸ್‌ಲೆಂಟ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತಾ ರಾಮಚಂದ್ರ ಹೆಗ್ಡೆ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ. ಪ್ರಸನ್ನ ಕುಮಾರ್ ಐತಾಳ್, ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್ ನಾಯಕ್ ಕೆ., ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧ ಯು. ಶೆಟ್ಟಿ ಹಾಗೂ ಮಂಗಳೂರಿನ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಕರುಣಾಕರ ಬಳ್ಳೂರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಸಮಿತಿಯ ಅಧ್ಯಕ್ಷ ಯುವರಾಜ್ ಜೈನ್ ಮತ್ತು ಕಾರ್ಯದರ್ಶಿ ಡಾ. ಮಂಜುನಾಥ್ ಎಸ್. ರೇವಣಕರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.ಸಮಿತಿಯ ಜೊತೆ ಕಾರ್ಯದರ್ಶಿಗಳಾದ ಸವಣೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಸಿಇಒ ಅಶ್ವಿನ್ ಶೆಟ್ಟಿ , ಬೆಳ್ತಂಗಡಿಯ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸಮಿತಿಯ ಉಪಾಧ್ಯಕ್ಷರುಗಳಾಗಿ ಅಲ್ ಬದ್ರಿಯಾ ಎಜುಕೇಶನಲ್ ಅಸೋಸಿಯೇಶನ್, ಕೃಷ್ಣಪುರ, ಸುರತ್ಕಲ್, ಮಂಗಳೂರಿನ ಸಂಚಾಲಕ ಬಿ. ಎ. ನಝೀರ್, ಮೂಡಬಿದಿರೆಯ ನ್ಯೂ ವೈಬ್ರೆಂಟ್ ಕಲ್ಲಬೆಟ್ಟು ಟ್ರಸ್ಟಿ ಚಂದ್ರಶೇಖರ ರಾಜೇ ಅರಸ್ ಹೆಚ್.ಆರ್., ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಅಧ್ಯಕ್ಷ ರವೀಂದ್ರ ಪಿ., ಉಜಿರೆಯ ಎಸ್‌ಡಿಎಂ ಸಮೂಹ ಶಿಕ್ಷಣ ಸಂಸ್ಥೆಗಳ, ಕಾರ್ಯನಿರ್ವಹಣಾಧಿಕಾರಿ ಪೂರನ್ ವರ್ಮ ಹಾಗೂ ಶ್ರೀ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯದ ಅಧ್ಯಕ್ಷ ಗಣೇಶ್ ಪ್ರಸಾದ್ , ಸಲಹೆಗಾರ ಹಾಗೂ ಖಜಾಂಚಿ ಶಕ್ತಿ ಸಮೂಹ ಶಿಕ್ಷಣ ಸಂಸ್ಥೆ, ಶಕ್ತಿನಗರ, ಮಂಗಳೂರಿನ ರಮೇಶ್ ಕೆ., ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಕೆ.ಎಮ್ ಉಪಸ್ಥಿತರಿದ್ದರು.

ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಗೈದರು.ಎಸ್.ಡಿ.ಎಂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ದಿವಾ ಕೊಕ್ಕಡ ಸ್ವಾಗತಿಸಿದರು. ಕುಷ್ಮಾ ಕಾರ್ಯದರ್ಶಿ ಡಾ. ಮಂಜುನಾಥ್ ಎಸ್. ರೇವಣಕರ್ ಸ್ವಾಗತಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಜೆಸಿಐ ಮಡಂತ್ಯಾರಿನ ಜೇಸಿ ಸಪ್ತಾಹದ ಮೂರನೇ ದಿನ ಮಹಿಳಾ‌ ಸಂಭ್ರಮ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya
error: Content is protected !!