24.2 C
ಪುತ್ತೂರು, ಬೆಳ್ತಂಗಡಿ
October 14, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವಾರೆಂಟ್ ಆರೋಪಿ ರವಿಕುಮಾರ್ ಮಹಾರಾಷ್ಟ್ರದಲ್ಲಿ ಬಂಧನ

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ದಿ.ಕೃಷ್ಣಪ್ಪ ಪೂಜಾರಿ ಮಗ ರವಿಕುಮಾರ್(32) ಎಂದು ಗುರುತಿಸಲಾಗಿದೆ.ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 70/2021ರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಕಲಂ 341, 504, 506, 354(B), 427 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಬಂಟ್ವಾಳದ ಮಾನ್ಯ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 20/2022ರಡಿ ವಿಚಾರಣೆಯಲ್ಲಿತ್ತು.

ನ್ಯಾಯಾಲಯದ ವಾರೆಂಟ್ ಜಾರಿಯಾಗಿದ್ದರೂ ಆರೋಪಿ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಆತನನ್ನು ಅ.12 ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ.ಸಿ.ಕೆ ಹಾಗೂ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಶ್ ಕೆ.ವಿ ನೇತೃತ್ವದ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜೇಶ್,ಪೊಲೀಸ್ ಕಾನ್‌ಸ್ಟೆಬಲ್ ಚೋಳಪ್ಪ ಸಂಶಿ, ನಾಗರಾಜ್ ಅವರು ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬೆಳ್ತಂಗಡಿ ಉಪವಿಭಾಗ ಕಚೇರಿಯ ರಾಜೇಶ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ ಕುಮಾರ್ ಮತ್ತು ದಿವಾಕರ್ ಅವರು ಕಾರ್ಯಾಚರಣೆಗೆ ಸಹಕರಿಸಿದ್ದಾರೆ. ಬಂಧಿತ ಆರೋಪಿಯನ್ನು ಅ.13 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಆರು ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ಮುಂದಿನ ವಿಚಾರಣೆಯ ದಿನಾಂಕವನ್ನು ಅ.19 ಕ್ಕೆ ಮುಂದೂಡಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya
error: Content is protected !!