33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್; ಬೆಳ್ತಂಗಡಿ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣಗಳಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯೂಟ್ಯೂಬರ್ ಶಿಲ್ಪ ಶೆಟ್ಟಿ ಮಂಗಳೂರು ಎoಬವರ ವಿರುದ್ಧ ಕೇಸು ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕರಿಗೆ ಅ. 13 ರoದು ಮನವಿಯನ್ನು ನೀಡಲಾಯಿತು.

ಛಾಯಾಗ್ರಾಣವು ಕೌಶಲ್ಯ ಪರಿಶ್ರಮ ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ಬದ್ಧತೆಯನ್ನು ಒಳಗೊಂಡ ವೃತ್ತಿಯಾಗಿರುತ್ತದೆ ಜಾಲತಾಣಗಳಲ್ಲಿ ಇಂತಹ ಹೇಳಿಕೆಗಳು ವ್ಯಾಪಕವಾಗಿ ಸಾಧ್ಯತೆ ಇರುವುದರಿಂದ ಛಾಯಾಗ್ರಾಹಕರಲ್ಲಿ ನೋವನ್ನು ಉಂಟು ಮಾಡಿದೆ ಸಂಬಂಧ ಪಟ್ಟ ಇಲಾಖೆ ಇಂತಹ ಹೇಳಿಕೆಗಳನ್ನು ನೀಡುವವರನ್ನು ತಕ್ಷಣ ವಿಚಾರಿಸಿ ತಮಗೆ ನ್ಯಾಯವನ್ನು ಒದಗಿಸಿ ಕೊಡಬೇಕಾಗಿ ಬೆಳ್ತಂಗಡಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಒತ್ತಾಯಿಸಿರುತ್ತಾರೆ.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ವಲಯದ ಮಾಜಿ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಅಶೋಕ್ ಆಚಾರ್ಯ ನಾವೂರು ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!