33.4 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್‌ಬಾಲ್‌ನಲ್ಲಿ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಸಾಧನೆ: ಮಿನಿ ಒಲಿಂಪಿಕ್ಸ್ ರಾಜ್ಯಮಟ್ಟಕ್ಕೆ ಆರು ಮಂದಿ ಆಯ್ಕೆ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ನೆಟ್‌ಬಾಲ್ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ್ದು, 14ರ ವಯೋಮಾನದ ವಿಭಾಗದಲ್ಲಿ ಆರು ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ.

ಅ. 10ರಂದು ಮಂಗಳೂರಿನ ಕುಲಶೇಖರದ ಸೇಕ್ರೆಡ್ ಹಾರ್ಟ್ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ನೆಟ್‌ಬಾಲ್ ಆಯ್ಕೆ ಪಂದ್ಯಾಟದಲ್ಲಿ ಪ್ರಜ್ವಲ್, ಸುಹಾಸ್, ಪ್ರೀತಂ, ರೂಪೇಶ್, ನಿರೀಕ್ಷ ಹಾಗೂ ರಿತಿಕಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನವೆಂಬರ್ 14ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ V State Mini Games ಕ್ರೀಡಾಕೂಟದಲ್ಲಿ ಇವರು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!