ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ (KUPMA) ಪದಾಧಿಕಾರಿಗಳು ಹಾಗೂ ಗಣ್ಯರು ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್ಗೆ ಅ 13ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕೈಗಾರಿಕಾ ಪಾರ್ಕ್ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಉತ್ಪಾದನಾ ಪ್ರಕ್ರಿಯೆಗಳನ್ನು ವೀಕ್ಷಿಸಿದರು ಹಾಗೂ ಅಲ್ಲಿನ ಉದ್ಯೋಗಿಗಳೊಂದಿಗೆ ಸಂವಾದ ನಡೆಸಿ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಿರಿ ಕೈಗಾರಿಕಾ ಪಾರ್ಕ್ನ ಕಾರ್ಯವೈಖರಿ, ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಸಮಾಜಮುಖಿ ಸಾಧನೆಗಳನ್ನು ಮೆಚ್ಚಿದ ಗಣ್ಯರು, ಇದು ನಿಜಕ್ಕೂ ಶ್ಲಾಘನೀಯ ಸಾಧನೆಯಾಗಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ದೂರದೃಷ್ಟಿ, ಮಾರ್ಗದರ್ಶನ ಮತ್ತು ಸಮಾಜಮುಖಿ ಚಿಂತನೆಗೆ ತಮ್ಮ ಅಭಿನಂದಿಸಿದರು.
ಈ ಭೇಟಿಯನ್ನು ಸಿರಿ ಕೈಗಾರಿಕಾ ಪಾರ್ಕ್ನ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ ಹಾಗೂ KUPMA ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪೂರನ್ ವರ್ಮ ಸಂಯೋಜಿಸಿದರು.












