ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ನೆಟ್ಬಾಲ್ ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ್ದು, 14ರ ವಯೋಮಾನದ ವಿಭಾಗದಲ್ಲಿ ಆರು ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದಾರೆ.
ಅ. 10ರಂದು ಮಂಗಳೂರಿನ ಕುಲಶೇಖರದ ಸೇಕ್ರೆಡ್ ಹಾರ್ಟ್ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ನೆಟ್ಬಾಲ್ ಆಯ್ಕೆ ಪಂದ್ಯಾಟದಲ್ಲಿ ಪ್ರಜ್ವಲ್, ಸುಹಾಸ್, ಪ್ರೀತಂ, ರೂಪೇಶ್, ನಿರೀಕ್ಷ ಹಾಗೂ ರಿತಿಕಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನವೆಂಬರ್ 14ರಿಂದ 21ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ V State Mini Games ಕ್ರೀಡಾಕೂಟದಲ್ಲಿ ಇವರು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.












