October 15, 2026
Uncategorized

ನಾವೂರು ಡಾ.ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣಓರ್ವ ಆರೋಪಿಯ ಬಂಧನ – ಶಂಕಿತ ಇಬ್ಬರು ವ್ಯಕ್ತಿಗಳ ವಶ

ಬೆಳ್ತಂಗಡಿ: ನಾವೂರಿನ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಆರಂಭಿಸಿದ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧನಗೊಳಿಸಿರುವ ಬಗ್ಗೆ ವರದಿಯಾಗಿದೆ.

ಈ ಪ್ರಕರಣದಲ್ಲಿ ಶಂಕಿತ ಇಬ್ಬರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಆರೋಗ್ಯ ಕ್ಲಿನಿಕ್‌ಗೆ ರಾತ್ರಿ ಸಮಯ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ನಾವೂರು ನಿವಾಸಿ ರವಿ ಪೂಜಾರಿಯನ್ನು ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ನಾವೂರು ನಿವಾಸಿ ಸುರೇಶ್ ಇಂಚರ ಎಂಬಾತನನ್ನು ಅ.14ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರಾತ್ರಿ ಪುತ್ತೂರಿನ ಕೌಡಿಚಾರು ಎಂಬಲ್ಲಿದ್ದ ದಿನೇಶ್ ಪ್ರಭು ನಾವೂರು ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅ.7ರಂದು ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ತಡ ರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕನ್ನು ಬೆಚ್ಚಿಬೀಳಿಸಿತ್ತು. ಯಾರೋ ಕಿಡಿಗೇಡಿಗಳು ದಹನಶೀಲ ದ್ರವ್ಯವನ್ನು ಉಪಯೋಗಿಸಿ ನಾವೂರಿನ ಡಾ.ಪ್ರದೀಪ ಎಂಬವರ ಆರೋಗ್ಯ ಕ್ಲಿನಿಕ್‌ನಲ್ಲಿ ಕೃತ್ಯ ನಡೆಸಿ ಸುಮಾರು 2-3ಲಕ್ಷ ರೂ ನಷ್ಟ ಉಂಟಾಗಿದೆ. ಔಷಧಿಗಳು, ವೈದ್ಯಕೀಯ ಸಲಕರಣೆಗಳು ಸಂಪೂರ್ಣ ಸುಟ್ಟು ಹೋಗಿತ್ತು. ಈ ಬಗ್ಗೆ ಬಿಎನ್‌ಎಸ್ ಕಲಂ 326, 324 ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಡಾ| ಪ್ರದೀಪ್ ಅವರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಕುರಿತು ತಾಲೂಕಿನಾದ್ಯಂತ ನಾಗರಿಕರು ಖಂಡನೆ ವ್ಯಕ್ತಪಡಿಸಿದ್ದರು. ಶಾಸಕ ಹರೀಶ್ ಪೂಂಜ, ಜನಪ್ರತಿನಿಧಿಗಳು, ವಿವಿಧ ಸಮಾಜ ಮುಖಂಡರುಗಳು, ಉದ್ಯಮಿಗಳು, ವೈದ್ಯರು ಸೇರಿದ್ದಂತೆ ಸಾರ್ವಜನಿಕರು ಕೃತ್ಯ ಎಸಗಿದವರ ಬಂಧನಕ್ಕೆ ಆಗ್ರಹಿಸಿದ್ದರು. ನಾವೂರಿನ ಗ್ರಾಮಸ್ಥರು ಈ ಘಟನೆಯ ವಿರುದ್ಧ ಖಂಡನಾ ಸಭೆ ನಡೆಸಿ ಕೃತ್ಯ ಎಸಗಿದವರ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದರು. ಹಲವಾರು ಸಂಘಟನೆಯವರು ಆರೋಪಿಗಳ ಪತ್ತೆಗೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದರು. ಪ್ರಕರಣದ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು ಕೃತ್ಯ ನಡೆದ ಒಂದು ವಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನಾವೂರಿನಲ್ಲಿ ನಡೆದ ಈ ಘಟನೆ ಸಾರ್ವಜನಿಕರನ್ನು ದಿಗ್ಬ್ರಮೆಗೊಳಿಸಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್‌ಪಿ ರೋಹಿಣಿ, ಬೆಳ್ತಂಗಡಿ ಠಾಣಾ ಪೊಲೀಸರು, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಡಿವೈಎಸ್‌ಪಿ ರೋಹಿಣಿ ಸಿ.ಕೆ.ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಉಪ ನೀರಿಕ್ಷಕರಾದ ಆನಂದ್ ಹಾಗೂ ಸಿಖಂದರ್ ಪಾಷಾ ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Related posts

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya
error: Content is protected !!