32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಬಸ್ ನಿಲ್ದಾಣದ ಬಳಿ ಅಡ್ಡದಿಡ್ಡಿ ಪಾರ್ಕಿಂಗ್ ಕಿರಿಕಿರಿ ; ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ

ಬೆಳ್ತಂಗಡಿ: ಮಡಂತ್ಯಾರು ಬಸ್ ನಿಲ್ದಾಣದ ಮುಂದೆ ಆಟೋ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್‌ನಿAದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮಡಂತ್ಯಾರಿನಿAದ ಮಂಗಳೂರಿಗೆ ತೆರಳುವ ಬಸ್ ನಿಲ್ದಾಣದ ಮುಂಭಾಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಬಸ್‌ಗಳ ಸಂಚಾರ ಹಾಗೂ ಪ್ರಯಾಣಿಕರ ಓಡಾಟಕ್ಕೆ ಅಡಚಣೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಬೆಳ್ತಂಗಡಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಾದುಹೋಗುವ ವಾಣಿಜ್ಯ ನಗರ ಮಡಂತ್ಯಾರ್ ಪ್ರದೇಶದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಸ್ಥರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಿದ್ದಾರೆ. ಆದರೆ ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಮಡಂತ್ಯಾರ್ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಸಮರ್ಪಕ ನಿಲುಗಡೆ ವ್ಯವಸ್ಥೆ ಇಲ್ಲದಿರುವುದು, ಆಟೋ ರಿಕ್ಷಾಗಳ ನಿಲುಗಡೆ ಹಾಗೂ ರಸ್ತೆ ಕಾಮಗಾರಿಯಿಂದಾಗಿ ಸಂಚಾರಕ್ಕೆ ತೊಂದರೆ ಉಂಟಾಗಿ, ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಕಷ್ಟ ಅನುಭವಿಸುವಾಂತಗಿದೆ ಎಂಬ ಕೂಗು ಪ್ರಯಾಣಿಕರದು.

ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮಡಂತ್ಯಾರ್ ಜಂಕ್ಷನ್ ಪ್ರದೇಶವಾಗಿದ್ದು ಉಪ್ಪಿನಂಗಡಿ, ಕಲ್ಲೇರಿ, ಕಕ್ಕೆಪದವು ಸಹಿತ ಸುತ್ತಮುತ್ತಲಿನ ಜನರು ಬಂದು ಸೇರುವ ಪಟ್ಟಣವಾಗಿದೆ. ಇಲ್ಲಿ ಶಾಲಾ-ಕಾಲೇಜುಗಳಿರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪ್ರತಿದಿನ ಬಸ್‌ಗಳನ್ನು ಅವಲಂಬಿಸಿದ್ದು, ಬಸ್‌ಗಳು ಸರಿಯಾದ ಸ್ಥಳದಲ್ಲಿ ನಿಲ್ಲದಿರುವುದರಿಂದ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಹಾಗೂ ವಯೋವೃದ್ಧರು ಬಸ್ ಹತ್ತಲು ಮತ್ತು ಇಳಿಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ನೋವು ಪ್ರಯಾಣಿಕರದು.

ಆದ್ದರಿಂದ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ನಿಲುಗಡೆ ಸ್ಥಳವನ್ನು ಗುರುತಿಸಿ, ಸಾರಿಗೆ ಬಸ್‌ಗಳಿಗೆ ಸುರಕ್ಷಿತವಾಗಿ ನಿಲ್ಲಲು ಸೂಕ್ತ ಬಸ್‌ನಿಲ್ದಾಣ/ ಬಸ್‌ಬೇ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ಬಸ್ ನಿಲುಗಡೆ ವ್ಯವಸ್ಥೆ ಹಾಗೂ ಅಗತ್ಯ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತುತ ಇರುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನು ತಕ್ಷಣ ಕಲ್ಪಿಸುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಸಮಸ್ಯೆ ಮರುಕಳಿಸದಂತೆ ಶಾಶ್ವತ ಹಾಗೂ ವೈಜ್ಞಾನಿಕ ಸಂಚಾರ ವ್ಯವಸ್ಥೆಯನ್ನು ರೂಪಿಸುವಂತೆ ಪ್ರಯಾಣಿಕರು ಆಗ್ರಹಿಸಿದ್ದಾರೆ. ಇನ್ನೂ ಈ ಬಸ್‌ನಿಲ್ದಾಣ ಸಮಸ್ಯೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಯುವಕರೊಬ್ಬರು ವೀಡಿಯೋ ಹಂಚಿಕೊಂಡಿದ್ದು ಇದು ಸದ್ಯ ವೈರಲ್ ಆಗುತ್ತಿದೆ.

Related posts

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!