26.3 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವನ್ಯಜೀವಿ ರಕ್ಷಿತಾರಣ್ಯದಲ್ಲಿ ಮರ ಕಡಿದ ಪ್ರಕರಣ : ಓರ್ವನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡಿದ ಬಗ್ಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶರ್ಮಿಷ್ಠಾ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಅ.13 ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಹಲಸಿನ ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಅ.14 ರಂದು ವನ್ಯಜೀವಿ ರಕ್ಷಣೆ ಕಾಯ್ದೆ 27,29,35,50,51,55 ಅಡಿಯಲ್ಲಿ ನಾವೂರು ಗ್ರಾಮದ ನಿವಾಸಿ ಪ್ರಮೋದ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ .

Related posts

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!