31.2 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟ: ಆತಿಥೇಯ ಎಸ್‌ಡಿಎಂ ಪಾಲಿಟೆಕ್ನಿಕ್‌ಗೆ ಪ್ರಥಮ ಸ್ಥಾನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್, ಉಜಿರೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಉಜಿರೆಯ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಬಾಲಕರ ವಿಭಾಗದಲ್ಲಿ ಆತಿಥೇಯ ಎಸ್‌ಡಿಎಂ ಪಾಲಿಟೆಕ್ನಿಕ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ದ್ವಿತೀಯ, ಮಂಗಳೂರಿನ ಪಿ.ಎ. ಪಾಲಿಟೆಕ್ನಿಕ್ ತೃತೀಯ ಹಾಗೂ ಮೂಡುಬಿದಿರೆಯ ಎಸ್.ಎನ್.ಎಂ. ಪಾಲಿಟೆಕ್ನಿಕ್ ಚತುರ್ಥ ಸ್ಥಾನ ಪಡೆದವು. ಬಾಲಕಿಯರ ವಿಭಾಗದಲ್ಲಿ ಮಂಗಳೂರಿನ ಬೊಂದೆಲ್‌ನ ಮಹಿಳಾ ಪಾಲಿಟೆಕ್ನಿಕ್ (ಡಬ್ಲ್ಯು.ಪಿ.ಟಿ.) ತಂಡ ಪ್ರಥಮ ಸ್ಥಾನ ಗಳಿಸಿದರೆ, ಉಜಿರೆಯ ಎಸ್‌ಡಿಎಂ ಪಾಲಿಟೆಕ್ನಿಕ್ ತಂಡ ದ್ವಿತೀಯ ಸ್ಥಾನ ಪಡೆಯಿತು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್. ಮಾತನಾಡಿ, ಕಬಡ್ಡಿ ಭಾರತೀಯರ ಹೆಮ್ಮೆಯ ಕ್ರೀಡೆಯಾಗಿದ್ದು, ಧೈರ್ಯ, ಸ್ಥೈರ್ಯ, ದೈಹಿಕ ಸಾಮರ್ಥ್ಯ ಹಾಗೂ ತಂಡಭಾವನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಆಟಗಳತ್ತ ಹೆಚ್ಚು ಆಕರ್ಷಿತರಾಗುತ್ತಿರುವುದರಿಂದ ದೈಹಿಕ ಶ್ರಮದ ಕ್ರೀಡೆಗಳಲ್ಲಿ ಭಾಗವಹಿಸುವ ಆಸಕ್ತಿ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಚೈತನ್ಯವೂ ವೃದ್ಧಿಯಾಗುತ್ತದೆ. ಪಂದ್ಯಾವಳಿಯಲ್ಲಿ ಸೋಲು ಅನುಭವಿಸಿದವರು ನಿರಾಶರಾಗದೆ, ಸೋಲಿನಿಂದ ಪಾಠ ಕಲಿತು ಮುಂದಿನ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸಬೇಕು ಎಂದು ಅವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್ (ರಿ.), ಉಜಿರೆಯ ಕಾರ್ಯದರ್ಶಿ ರಮೇಶ್ ಎಚ್., ಎಸ್‌ಡಿಎಂ ಪಾಲಿಟೆಕ್ನಿಕ್‌ನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಎಸ್‌ಡಿಎಂ ಕ್ರೀಡಾ ಸಂಘದ ಕಬಡ್ಡಿ ತರಬೇತುದಾರ ಹಾಗೂ ರಾಷ್ಟ್ರೀಯ ಮಟ್ಟದ ತೀರ್ಪುಗಾರ ಕೃಷ್ಣಾನಂದ ರಾವ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಶ್ವಂತ್ ಗೌಡ ಹಾಗೂ ಕಾಲೇಜಿನ ಮಾಜಿ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಪೂಜಾರಿ ಉಪಸ್ಥಿತರಿದ್ದರು.

ಪಂದ್ಯಾವಳಿಯಲ್ಲಿ ವೈಯಕ್ತಿಕ ಪ್ರಶಸ್ತಿಗಳನ್ನೂ ವಿತರಿಸಲಾಯಿತು. ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯ ಶ್ರವಣ್ ಉತ್ತಮ ದಾಳಿಗಾರ ಪ್ರಶಸ್ತಿ ಪಡೆದರೆ, ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಚರಣ್ ಆಳ್ವ ಉತ್ತಮ ಹಿಡಿತಗಾರ ಪ್ರಶಸ್ತಿ ಗಳಿಸಿದರು. ಎಸ್‌ಡಿಎಂ ಪಾಲಿಟೆಕ್ನಿಕ್‌ನ ವಿಬಿನ್ ಪೂಜಾರಿ ಉತ್ತಮ ಆಟಗಾರ ಪ್ರಶಸ್ತಿಗೆ ಭಾಜನರಾದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಈಶ್ವರ್ ಶರ್ಮ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

Related posts

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!