October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕನ್ಯಾಡಿಯಲ್ಲಿ ಯಾತ್ರಿಕರಿಗೆ ಅನುಕೂಲವಾಗುವ ಸುವರ್ಣ ರೆಸಾರ್ಟ್ ಶುಭಾರಂಭ

ಬೆಳ್ತಂಗಡಿ: ತಾಲೂಕಿನ ಪ್ರಖ್ಯಾತ ವಾಣಿಜ್ಯ ಸಂಸ್ಥೆ ಸುವರ್ಣ ಆರ್ಕೇಡ್‌ನ ಸಹಸಂಸ್ಥೆಯಾದ ನೂತನ ಸುವರ್ಣ ರೆಸಾರ್ಟ್ ಧರ್ಮಸ್ಥಳದ ಕನ್ಯಾಡಿಯಲ್ಲಿ ಅ. 14ರಂದು ಶುಭಾರಂಭಗೊಂಡಿತು.

ಶ್ರೀ ರಾಮಕ್ಷೇತ್ರ ಕನ್ಯಾಡಿಯ ಪೀಠಾಧಿಪತಿಗಳಾದ ಪರಮಪೂಜ್ಯ ಸದ್ಗುರು ಶ್ರೀ ಶ್ರೀ ಶ್ರೀ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜ್ಯೋತಿ ಬೆಳಗಿಸುವ ಮೂಲಕ ರೆಸಾರ್ಟ್ ಉದ್ಘಾಟಿಸಿ, ಸಂಸ್ಥೆಯ ಅಭಿವೃದ್ಧಿಗೆ ಶುಭ ಹಾರೈಸಿದರು.

ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಶ್ರೀ ರಾಮಕ್ಷೇತ್ರ ಕನ್ಯಾಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಭಕ್ತಾದಿಗಳು ಮತ್ತು ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುವರ್ಣ ರೆಸಾರ್ಟ್ ಆರಂಭಿಸಿರುವುದು ಸಂತಸದ ವಿಚಾರ. ಇಲ್ಲಿ ವಾಸ್ತವ್ಯ ಹೂಡುವ ಅತಿಥಿಗಳಿಗೆ ಗುಣಮಟ್ಟದ ಆತಿಥ್ಯ ಹಾಗೂ ಉತ್ತಮ ಸೇವೆ ನೀಡುವ ಮೂಲಕ ಸಂಸ್ಥೆಯು ಗ್ರಾಹಕರ ವಿಶ್ವಾಸ ಗಳಿಸಲಿ. ಸೇವಾ ಮನೋಭಾವದೊಂದಿಗೆ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಾ ಮತ್ತಷ್ಟು ಬೆಳಗಲಿ ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುವರ್ಣ ಆರ್ಕೇಡ್‌ನ ಮಾಲಕ ವೈ. ನಾಣ್ಯಪ್ಪ ಪೂಜಾರಿ, ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಗುಣಮಟ್ಟದ ವಸತಿ ಮತ್ತು ಆತಿಥ್ಯ ಒದಗಿಸುವುದು ಇಂದಿನ ಅಗತ್ಯವಾಗಿದೆ. ಧರ್ಮಸ್ಥಳ ಹಾಗೂ ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ನಾಡಿನ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುವರ್ಣ ರೆಸಾರ್ಟ್ ಆರಂಭಿಸಲಾಗಿದೆ. ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ಆತಿಥ್ಯ ನೀಡುವುದರೊಂದಿಗೆ ಅವರ ವಿಶ್ವಾಸಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಸುವರ್ಣ ರೆಸಾರ್ಟ್‌ನ ಮಾಲಕರಾದ ಶ್ರೀಮತಿ ಬೇಬಿ ಸುವರ್ಣ, ವೈ. ನಾಣ್ಯಪ್ಪ ಪೂಜಾರಿ ಹಾಗೂ ಅವರ ಮಕ್ಕಳು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.


ಯಾತ್ರಿಕರು ಮತ್ತು ಪ್ರವಾಸಿಗರಿಗೆ ಅನುಕೂಲಕರ ವಾತಾವರಣ: ಸಂಪತ್ ಬಿ. ಸುವರ್ಣ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಯಾತ್ರಿಕರು, ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡುವ ಭಕ್ತರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಸುವರ್ಣ ರೆಸಾರ್ಟ್‌ನಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಹಾಗೂ ಆಕರ್ಷಕ ವಿನ್ಯಾಸದ ಕಾಟೇಜ್‌ಗಳು ರೆಸಾರ್ಟ್‌ನ ವಿಶೇಷ ಆಕರ್ಷಣೆಯಾಗಿವೆ. ಯಾತ್ರಿಕರು ಮತ್ತು ಪ್ರವಾಸಿಗರು ಆರಾಮದಾಯಕವಾಗಿ ವಾಸ್ತವ್ಯ ಹೂಡಲು ಅನುಕೂಲವಾಗುವಂತೆ ಸಂಸ್ಥೆಯನ್ನು ರೂಪಿಸಲಾಗಿದೆ. ಉತ್ತಮ ಆತಿಥ್ಯ ಹಾಗೂ ಗುಣಮಟ್ಟದ ಸೇವೆ ನೀಡುವ ಮೂಲಕ ಗ್ರಾಹಕರಿಗೆ ಉತ್ತಮ ಅನುಭವ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಸುವರ್ಣ ರೆಸಾರ್ಟ್‌ನ ಸಂಪತ್ ಬಿ. ಸುವರ್ಣ ತಿಳಿಸಿದರು.

Related posts

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya
error: Content is protected !!