32.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 18: ಕಾಶಿಪಟ್ಣದಲ್ಲಿ 15ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ 15ನೇ ವರ್ಷದ ಕಾಶಿಪಟ್ಣ ಶ್ರೀ ಶಾರದೋತ್ಸವವು ಅ. 18ರಂದು ಕಾಶಿಪಟ್ಣದ ಕೇಳ ಗರಡಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ, ಗಣಹೋಮ, ಪುಸ್ತಕ ಪೂಜೆ, ನೃತ್ಯ ವೈಭವ, ಬಹುಮಾನ ವಿತರಣೆ ಹಾಗೂ ವೈಭವದ ಶೋಭಾಯಾತ್ರೆ ನಡೆಯಲಿದೆ. ವಿಶೇಷವಾಗಿ ಚಂಡಿಕಾಯಾಗ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ಕಾಡಗಗ್ಗರ’ ನಾಟಕ ಪ್ರದರ್ಶನಗೊಳ್ಳಲಿದೆ.

15ನೇ ವರ್ಷದ ಶಾರದೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಮಿತಿಯು ಮನವಿ ಮಾಡಿದೆ.

Related posts

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!