27.8 C
ಪುತ್ತೂರು, ಬೆಳ್ತಂಗಡಿ
October 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಡಾ| ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಬಂಧಿತ ಆರೋಪಿ ರವಿಕುಮಾರ್ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ: ಇನ್ನಿಬ್ಬರು ಆರೋಪಿಗಳಾದ ಸುರೇಶ್ ಪಿ.ಎನ್, ದಿನೇಶ್ ಪ್ರಭು ಮಂಗಳೂರು ಜೈಲಿಗೆ

ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಅ. 6 ರಂದು ರಾತ್ರಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು ಅ.15ರಂದು ಸಂಜೆ ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇದರಲ್ಲಿ ಒಬ್ಬ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ನಾವೂರು ನಿವಾಸಿ ರವಿ ಕುಮಾರ್ (31ವ) ಎಂಬಾತನನ್ನು ಈ ಪ್ರಕರಣದ ಹೆಚ್ಚಿನ ವಿಚಾರಣೆಗೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸುರೇಶ್ ಪಿ.ಎನ್ (44ವ) ಮತ್ತು ದಿನೇಶ್ ಪ್ರಭು (51ವ) ಎಂಬವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧವನ್ನು ವಿಧಿಸಿದ್ದು, ಅವರನ್ನು ಮಂಗಳೂರು ಜೈಲಿಗೆ ಕಳುಹಿಸಲಾಗಿದೆ.
ಅ.6ರಂದು ರಾತ್ರಿ ನಾವೂರು ಪೇಟೆಯಲ್ಲಿರುವ ಸ್ವಾತಿ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ತಡ ರಾತ್ರಿ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕನ್ನು ಬೆಚ್ಚಿಬೀಳಿಸಿತ್ತು. ಯಾರೋ ಕಿಡಿಗೇಡಿಗಳು ಡಿಸೇಲ್ ಸುರಿದು ಈ ಕೃತ್ಯ ನಡೆಸಿದ್ದರು. ಇದರಿಂದಾಗಿ ಡಾ. ಪ್ರದೀಪ್ ಅವರಿಗೆ ಸುಮಾರು 2ರಿಂದ 3 ಲಕ್ಷ ರೂ ನಷ್ಟ ಉಂಟಾಗಿತ್ತು. ಔಷಧಿಗಳು, ವೈದ್ಯಕೀಯ ಸಲಕರಣೆಗಳು ಸಂಪೂರ್ಣ ಸುಟ್ಟು ಹೋಗಿತ್ತು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಬಿಎನ್‌ಎಸ್ ಕಲಂ 326, 324ರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೈಗೊತ್ತಿಕೊಂಡ ಪೊಲೀಸರು ವಿವಿಧ ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿ, ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ನಾವೂರು ನಿವಾಸಿ ರವಿ ಕುಮಾರ್ ನನ್ನು ಅ.13ರಂದು ಪ್ರಥಮವಾಗಿ ಬಂಧಿಸಿ ವಿಚಾರಣೆ ನಡೆಸಿದ್ದರು. ಬಳಿಕ ನಾವೂರು ನಿವಾಸಿ ಸುರೇಶ್ ಪಿ.ಎನ್ ಎಂಬಾತನನ್ನು ಅ.14 ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಅದೇ ದಿನ ರಾತ್ರಿ ಪುತ್ತೂರಿನ ಕೌಡಿಚಾರು ಎಂಬಲ್ಲಿದ್ದ ದಿನೇಶ್ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ಬಳಿಕ ಅ.15 ರಂದು ಮೂರು ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇದರಲ್ಲಿ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿ ರವಿಕುಮಾರ್ ಎಂಬಾತನನ್ನು ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಉಳಿದ ಇಬ್ಬರನ್ನು ಮಂಗಳೂರು ಜೈಲಿಗೆ ಹಾಕಲಾಗಿದೆ. ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುವ ರವಿಕುಮಾರ್‌ನಿಂದ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯಲಿದೆ.

Related posts

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ

Suddi Udaya
error: Content is protected !!